ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಮ್ಯಾಚ್
ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಟೀಮ್ ಇಂಡಿಯಾ ಭಾರೀ ಪ್ಲಾನ್
ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಿಂದ ಯುವ ಬ್ಯಾಟರ್ಗೆ ಕೊಕ್
ಇಂದು ಚೆನ್ನೈನ ಎಂ. ಚಿದಂಬರಂ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ಮುಖಾಮುಖಿ ಆಗಿದೆ. ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿದ್ದು, ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲೇ ಮೊದಲ ದಿನದ ಅಂತ್ಯಕ್ಕೆ 80 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 339 ರನ್ ಕಲೆ ಹಾಕಿದೆ.
ಭಾರತ ಕ್ರಿಕೆಟ್ ತಂಡ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಭಾರೀ ಕುತೂಹಲ ಮೂಡಿಸಿದೆ. ಬಾಂಗ್ಲಾದೇಶದ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಟೀಮ್ ಇಂಡಿಯಾ ರಣತಂತ್ರ ರೂಪಿಸಿದೆ. ಇಂದಿನ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಿದ್ದು, ಯುವ ಆಟಗಾರನಿಗೆ ಕೊಕ್ ನೀಡಲಾಗಿದೆ.
ಸರ್ಫರಾಜ್ ಖಾನ್ಗೆ ಕೊಕ್!
ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಸರ್ಫರಾಜ್ ಖಾನ್ ಅಥವಾ ಕೆಎಲ್ ರಾಹುಲ್ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿತ್ತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಎದುರಾಗಿದ್ದ ಕಾರಣ ಈ ಚರ್ಚೆ ಹುಟ್ಟಿಕೊಂಡಿತ್ತು. ಈಗ ಕ್ಯಾಪ್ಟನ್ ರೋಹಿತ್ ಕೊಟ್ಟ ಮಾತಿನಂತೆ ಕೆ.ಎಲ್ ರಾಹುಲ್ ಅವರನ್ನು ಆಡಿಸಿದ್ದು, ಪ್ಲೇಯಿಂಗ್ ಎಲೆವೆನ್ನಿಂದ ಸರ್ಫರಾಜ್ ಖಾನ್ ಅವರನ್ನು ಹೊರಹಾಕಿದ್ದಾರೆ.
ಕೆ.ಎಲ್ ರಾಹುಲ್ನಿಂದ ಸರ್ಫರಾಜ್ ಖಾನ್ಗೆ ತಪ್ಪಿದ ಚಾನ್ಸ್!
ಶ್ರೀಲಂಕಾ ಪ್ರವಾಸಕ್ಕೆ ಮುನ್ನ ನಡೆದ ಇಂಗ್ಲೆಂಡ್ ವಿರುದ್ಧದ ಚೊಚ್ಚಲ ಸರಣಿಯಲ್ಲಿ ಸರ್ಫರಾಜ್ ಖಾನ್ ಅದ್ಭುತ ಬ್ಯಾಟಿಂಗ್ ಮಾಡಿದ್ರು. ಈ ಮೂಲಕ ಇಡೀ ಕ್ರೀಡಾ ಲೋಕದ ಗಮನ ಸೆಳೆದರು. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ಗೆ ಟೀಮ್ ಇಂಡಿಯಾದಲ್ಲೂ ಸ್ಥಾನ ಪಡೆದರು. ಆದರೆ ಭಾರತ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಕಮ್ಬ್ಯಾಕ್ ಮಾಡಿರುವ ಕಾರಣ ಪ್ಲೇಯಿಂಗ್ ಎಲೆವೆನ್ನಲ್ಲಿ ಸರ್ಫರಾಜ್ಗೆ ಚಾನ್ಸ್ ಸಿಕ್ಕಿಲ್ಲ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್