/newsfirstlive-kannada/media/post_attachments/wp-content/uploads/2025/01/Sarigama-Viji1.jpg)
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ. ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಿರಿಯ ನಟ ಸರಿಗಮ ವಿಜಯ್ ಅವರಿಗೆ 77 ವರ್ಷ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯ ಕಳೆದ ಒಂದು ವಾರದಿಂದ ಸಂಪೂರ್ಣ ಹದಗೆಟ್ಟಿತ್ತು.
ಈಗ ಆಸ್ಪತ್ರೆಯಲ್ಲೇ ಚಿಕಿತ್ಸೆ ಫಲಕಾರಿಯಾಗದೆ ವಿಜಯ್ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 1 ಗಂಟಗೆ ಅಸ್ಪತ್ರೆಯಿಂದ ವಿಜಯ್ ನಿವಾಸಕ್ಕೆ ಮೃತದೇಹ ರವಾನೆಯಾಗಲಿದೆ. ಮಹಾಲಕ್ಷ್ಮಿಪುರಂ ನಲ್ಲಿರುವ ವಿಜಯ್ ನಿವಾಸಕ್ಕೆ ಮೃತದೇಹ ರವಾನೆಯಾಗಲಿದೆ.
1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡರು. ನಟ ಸರಿಗಮ ವಿಜಯ್ ಅವರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ ಸಾವಿರಕ್ಕೂ ಅಧಿಕ ಪ್ರದರ್ಶನ ಕಂಡಿದೆ.
ಇದನ್ನೂ ಓದಿ:ಮುಡಾ ಕೇಸ್; ಹೈಕೋರ್ಟ್ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ