/newsfirstlive-kannada/media/post_attachments/wp-content/uploads/2024/10/SATISH-1-1.jpg)
ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ. ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕೇಸ್ನಲ್ಲಿ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ ಆಗಿರುವ ಕಾರಣ ಶಾಸಕ ಸ್ಥಾನ ಅನರ್ಹಗೊಳ್ಳುವುದು ಖಚಿತವಾಗಿದೆ.
ಬೇಲಿಕೇರಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಹತ್ವದ ಆದೇಶ ನೀಡಿದೆ. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ 7 ಜನರನ್ನು ಅಪರಾಧಿಗಳೆಂದು ಕೋರ್ಟ್ ತೀರ್ಪು ನೀಡಿತ್ತು. ಇವತ್ತು ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದು, ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಭಾರೀ ಆಘಾತವಾಗಿದೆ. ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಭಾರೀ ದೊಡ್ಡ ಶಾಕ್ ಸಿಕ್ಕಿದೆ. ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲ ಅಪರಾಧಿಗಳಿಗೆ 7 ವರ್ಷ ಶಿಕ್ಷೆ ಮತ್ತು 44.54 ಕೋಟಿ ರೂಪಾಯಿ ದಂಡವನ್ನು ವಿಧಿಸಿ ಆದೇಶ ಪ್ರಕಟಿಸಿದ್ದಾರೆ.
ಇದನ್ನೂ ಓದಿ:BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಕಠಿಣ ಶಿಕ್ಷೆ ಪ್ರಕಟ; ಎಷ್ಟು ವರ್ಷ ಜೈಲು?
ಏನಿದು ಬೇಲೇಕೇರಿ ನಾಪತ್ತೆ ಪ್ರಕರಣ..?
- ಬಳ್ಳಾರಿಯಿಂದ ಅದಿರನ್ನ ಸಾಗಿಸಿ, ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು
- 2010ರಲ್ಲಿ 5 ಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಟನ್ ಅದಿರನ್ನ ಜಪ್ತಿ ಮಾಡಲಾಗಿತ್ತು
- ಸೀಜ್ ಮಾಡಿದ್ದ ಬರೋಬ್ಬರಿ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ
- ಅಕ್ರಮವಾಗಿ ಸಾಗಾಟ ಮಾಡಿದ ಆರೋಪ ಸತೀಶ್ ಸೈಲ್ ಮೇಲಿತ್ತು
- ಈ ಹಿನ್ನೆಲೆ ಕ್ರಿಮಿನಲ್ ಕಾನ್ಸ್ಪಿರೆಸಿ, ಚೀಟಿಂಗ್, ಫೋರ್ಜರಿ, ಟ್ರೆಸ್‌ಪಾಸ್
- ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸತೀಶ್ ಸೈಲ್ ವಿರುದ್ಧ ಪ್ರಕರಣ ದಾಖಲು
- ಸತೀಶ್ ಸೈಲ್ ಸೇರಿ 7 ಜನ ಅಪರಾಧಿಗಳೆಂದು ತೀರ್ಪು ನೀಡಲಾಗಿತ್ತು
7 ವರ್ಷ ಜೈಲು ಶಿಕ್ಷೆ.. !
ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ಸತೀಶ್ ಸೈಲ್ ಸೇರಿ ಎಲ್ಲ 7 ಅಪರಾಧಿಗಳು ಮನವಿ ಮಾಡಿಕೊಂಡಿದ್ದರು. ಆದ್ರೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲ ಅಪರಾಧಿಗಳಿಗೆ 7 ವರ್ಷ ಶಿಕ್ಷೆ ಮತ್ತು 44.54 ಕೋಟಿ ರೂಪಾಯಿ ದಂಡವನ್ನು ವಿಧಿಸಿ ಆದೇಶ ಪ್ರಕಟಿಸಿದ್ದಾರೆ.
ಇದನ್ನೂ ಓದಿ:ಬೇಲೇಕೇರಿ ಅದಿರು ನಾಪತ್ತೆ ಕೇಸ್ನಲ್ಲಿ ಶಾಸಕ ಸತೀಶ್ ಸೈಲ್ ಅಪರಾಧಿ; ಇಂದು ಶಿಕ್ಷೆ ಪ್ರಕಟಿಸಲಿರುವ ಕೋರ್ಟ್
ಸೈಲ್ ಶಾಸಕ ಸ್ಥಾನ ಅನರ್ಹ
ಅಪರಾಧ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಮೇಲ್ಪಟ್ಟು ಶಿಕ್ಷೆಯಾದ್ರೆ, ಶಾಸಕ ಸ್ಥಾನ ಅನರ್ಹವಾಗಲಿದೆ. ಇನ್ನು ಮೂರು ವರ್ಷಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆ ಆಗಿರುವುದರಿಂದ ಬೇಲ್ ಕೂಡ ಸಿಗಿದೋದಿಲ್ಲ. ಇದೀಗ ಸತೀಶ್ ಸೈಲ್ ಶಾಸಕ ಸ್ಥಾನ ಉಳಿಸಿಕೊಳ್ಳಬೇಕಾದ್ರೆ ಹೈಕೋರ್ಟ್ ಮೆಟ್ಟಿಲೇರಬೇಕು. ಹೈಕೋರ್ಟ್ನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ತಂದರೆ ಮಾತ್ರ. ಶಾಸಕ ಸ್ಥಾನ ಉಳಿಯಲಿದೆ. ಒಟ್ಟಾರೆ.. ಕಾರವಾರ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ ಆಗಿರುವ ಕಾರಣ ಆತಂಕ ಎದುರಾಗಿದೆ. ಇನ್ನು ಉಪ ಚುನಾವಣೆ ವೇಳೆ ಕಾಂಗ್ರೆಸ್ ಹೊಸ ತಲೆನೋವು ಶುರುವಾಗಿದ್ದು, ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ