newsfirstkannada.com

ಅಳಿಯನ ಆತ್ಮಹತ್ಯೆಗೆ ಮುನ್ನ ಪೊಲೀಸ್ರ ಜತೆ ಮಾತಾಡಿದ್ದ ಬಿ.ಸಿ ಪಾಟೀಲ್​​.. ಅಸಲಿಗೆ ನಡೆದಿದ್ದೇನು?

Share :

Published July 8, 2024 at 6:05pm

  ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ಆತ್ಮಹತ್ಯೆ ಮಾಡಿಕೊಂಡ ಅಳಿಯ

  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರಿಗೆ ಕರೆ ಮಾಡಿದ ಬಿ. ಸಿ ಪಾಟೀಲ್

  ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪತಿ ಸಾವು

ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ನಡೆದಿದೆ. ಪ್ರತಾಪ್ ಕುಮಾರ್ (41) ಆತ್ಮಹತ್ಯೆ ಮಾಡಿಕೊಂಡಿರೋ ಅಳಿಯ.

ಇದನ್ನೂ ಓದಿ: BREAKING: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್​ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್​ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್​ ಮೃತಪಟ್ಟಿದ್ದಾರೆ.

ಅಸಲಿಗೆ ಆಗಿದ್ದೇನು..?

ಅಳಿಯ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಬಿ. ಸಿ ಪಾಟೀಲ್ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಬಳಿಕ ಅಳಿಯನ ಮೊಬೈಲ್ ನಂಬರ್ ಹಾಗೂ ಕಾರು ನಂಬರ್ ಕೊಟ್ಟಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಾರೆ. ಕೂಡಲೇ ಅಳಿಯನನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿಕೊಂಡಿದ್ದಾರೆ. ಕೂಡಲೇ ಶಿವಮೊಗ್ಗ ಪೊಲೀಸರು ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ. ಮಧ್ಯಾಹ್ನ 3 ಘಂಟೆ ಸುಮಾರಿಗೆ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಆ ಸಮಯದಲ್ಲಿ ಪ್ರತಾಪ್ ಕುಮಾರ್​ ಕಾರಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದರಂತೆ. ಕೂಡಲೇ ಪೊಲೀಸರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಪ್ರತಾಪ್ ಅವರನ್ನು ದಾಖಲಿಸಿದ್ದಾರೆ. ಅವರ ಸ್ಥಿತಿ ಕ್ರಿಟಿಕಲ್ ಕಂಡಿಷನ್ ಇದ್ದಿದ್ರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಬಿ ಸಿ ಪಾಟೀಲ್ ಕುಟುಂಬಸ್ಥರು ಭೇಟಿ ಕೊಟ್ಟಿದ್ದಾರೆ. ಇವರ ಜೊತೆಗೆ ಸ್ಥಳಕ್ಕೆ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಕೂಡ ಆಗಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಳಿಯನ ಆತ್ಮಹತ್ಯೆಗೆ ಮುನ್ನ ಪೊಲೀಸ್ರ ಜತೆ ಮಾತಾಡಿದ್ದ ಬಿ.ಸಿ ಪಾಟೀಲ್​​.. ಅಸಲಿಗೆ ನಡೆದಿದ್ದೇನು?

https://newsfirstlive.com/wp-content/uploads/2024/07/bc-patil3.jpg

Load More