ಬೆಳ್ಳಂಬೆಳಗ್ಗೆ ಘೋರ ದುರಂತ.. ಸರ್ಕಾರಿ ಶಾಲೆಯ ಕಟ್ಟಡ ಕುಸಿದು ನಾಲ್ವರು ಮಕ್ಕಳು ಬಲಿ..

author-image
Ganesh
Updated On
ಬೆಳ್ಳಂಬೆಳಗ್ಗೆ ಘೋರ ದುರಂತ.. ಸರ್ಕಾರಿ ಶಾಲೆಯ ಕಟ್ಟಡ ಕುಸಿದು ನಾಲ್ವರು ಮಕ್ಕಳು ಬಲಿ..
Advertisment
  • ದುರ್ಘಟನೆಯಲ್ಲಿ 17 ಮಕ್ಕಳಿಗೆ ಗಂಭೀರ ಗಾಯ
  • ಸ್ಥಳೀಯರಿಂದ ಮಕ್ಕಳನ್ನು ಉಳಿಸಿಕೊಳ್ಳುವ ಪ್ರಯತ್ನ
  • ಗಾಯಗೊಂಡ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಸರ್ಕಾರಿ ಶಾಲೆಯ (Government school) ಕಟ್ಟಡ ಕುಸಿದು ನಾಲ್ವರು ಮಕ್ಕಳು ಸ್ಥಳದಲ್ಲೇ ಜೀವ ಕಳೆದುಕೊಂಡು, ಹಲವಾರು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ರಾಜಸ್ಥಾನದ ಝಲವರ್ (Rajasthan's Jhalawar)​​ ಜಿಲ್ಲೆಯಲ್ಲಿ ನಡೆದಿದೆ.

ಮನೋಹರ್ ಥನ ಬಳಿಯ ಪಿಪ್ಲೋಡಿ ಸರ್ಕಾರಿ ಶಾಲೆಯ ಕಟ್ಟಡ ಕುಸಿದಿದೆ. ಇಂದು ಬೆಳಗ್ಗೆ 8.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಾಲೆಯಲ್ಲಿ ಸುಮಾರು 40 ಮಕ್ಕಳಿದ್ದರು. ಜೊತೆಗೆ ಶಿಕ್ಷಕರು ಹಾಗೂ ಸಿಬ್ಬಂದಿ ಸಹ ಇದ್ದರು.

ಇದನ್ನೂ ಓದಿ: ಬನ್ನೇರುಘಟ್ಟದಿಂದ ಜಪಾನ್​ಗೆ ವಿಮಾನದಲ್ಲಿ ಹೊರಟ 4 ಆನೆಗಳು.. ಗಜ ಪಡೆ ಭಾರೀ ಬೇಸರ

ಮಾಹಿತಿಗಳ ಪ್ರಕಾರ, ಬಿಲ್ಡಿಂಗ್ ಮೊದಲೇ ಶಿಥಿಲಾವಸ್ಥೆಯಲ್ಲಿತ್ತು. ಈ ಬಗ್ಗೆ ಅನೇಕ ಬಾರಿ ದೂರುಗಳನ್ನು ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನ ಆಗಿರಲಿಲ್ಲ. ಅದೇ ಬಿಲ್ಡಿಂಗ್​ನಲ್ಲಿ 8ನೇ ತರಗತಿ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿತ್ತು.

ದುರಂತ ಸ್ಥಳಕ್ಕೆ ಎಸ್​ಪಿ ಅಮಿತ್​ ಕುಮಾರ್​ ಭೇಟಿ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಪ್ರಕಾರ, 4 ಮಕ್ಕಳು ಜೀವ ಕಳೆದುಕೊಂಡಿದ್ದಾರೆ. 17 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಭರಣ ಪ್ರಿಯರಿಗೆ ಸಮಾಧಾನದ ಸುದ್ದಿ.. ಕುಸಿಯುತ್ತಿದೆ ಚಿನ್ನದ ಬೆಲೆ, ಏರುವ ಮುನ್ನವೇ ಖರೀದಿಸಿ..!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment