ಬೆಳಗಾವಿಯ ಹಾರೂಗೊಪ್ಪ ಗ್ರಾಮದಲ್ಲಿ ಅವಘಡ
ವಾಹನ ಬದಲಾಯಿಸಿ ಅಂದರೂ ಕೇಳ್ತಿಲ್ಲಂತೆ ಶಾಲೆ
ಶಾಲಾ ಆಡಳಿತದ ನಡೆ ವಿರುದ್ಧ ಪೋಷಕರು ಆಕ್ರೋಶ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಕಬ್ಬಿನ ಗದ್ದೆಗೆ ಪಲ್ಟಿಯಾದ ಘಟನೆ ಜಿಲ್ಲೆಯ ಬೈಲಹೊಂಗಲದ ಹಾರೂಗೊಪ್ಪ ಗ್ರಾಮದಿಂದ ಮರಕುಂಬಿ ಗ್ರಾಮದ ನಡೆದಿದೆ.
ಗಣಾಚಾರಿ ಶಿಕ್ಷಣ ಸಂಸ್ಥೆಯ ಎಕ್ಸಲಂಟ್ ಎಜುಕೇಷನ್ ಸೊಸೈಟಿಗೆ ಸೇರಿದ ಶಾಲಾ ವಾಹನ ಎಂದು ತಿಳಿದುಬಂದಿದೆ. ವಾಹನದಲ್ಲಿ 37 ವಿದ್ಯಾರ್ಥಿಗಳು ಇದ್ದರು. ಸಣ್ಣ ವಾಹನದಲ್ಲಿ ಅಷ್ಟೊಂದು ಮಕ್ಕಳನ್ನು ಕೂರಿಸಿಕೊಂಡು ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸಣ್ಣ ವಾಹನದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕೂರಿಸಿದ್ದ ಆರೋಪ ಕೇಳಿಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಓಡಿ ಬಂದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಸಣ್ಣ ಪುಟ್ಟ ಗಾಯಗಳೊಂದಿಗೆ 37 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನ ಬದಲಾಯಿಸಿ ಎಂದು ಎಷ್ಟೇ ಹೇಳಿದರೂ ಸಹ ಕೇಳುತ್ತಿಲ್ಲ ಎಂದು ಪೋಷಕರು ಕಿಡಿ ಕಾರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ