ಶಾಲಾ ಬಸ್ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್
ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು
ಉಳಿದ ವಿದ್ಯಾರ್ಥಿಗಳ ಸ್ಥಿತಿಗತಿ ಹೇಗಿವೆ? ಏನಿದೆ ಅಪ್ಡೇಟ್?
ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವನ್ನಪ್ಪಿದ್ದಾರೆ.
ಸಮರ್ಥ (7) ಹಾಗೂ ಶ್ರೀಕಾಂತ ( 12) ಸಾವನ್ನಪ್ಪಿದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ಕು ವಿದ್ಯಾರ್ಥಿಗಳ ಕಾಲುಗಳು ತುಂಡಾಗಿ ಬಿದ್ದಿವೆ. ಉಳಿದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ: ಜ್ಯೂಸ್ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು.. ಉಸಿರಾಟ ಸಮಸ್ಯೆಯಿಂದ ಸಾವು
ಶಾಲೆಗೆ ಹೊರಟಿದ್ದ ವೇಳೆ ಮಾನ್ವಿ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ ಅಪಘಾತಕ್ಕೀಡಾಗಿದೆ. ಮಾನ್ವಿಯಿಂದ ರಾಯಚೂರು ಕಡೆಗೆ ಹೊರಟಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ