Advertisment

ವರುಣಾರ್ಭಟಕ್ಕೆ ಬೆಚ್ಚಿಬಿದ್ದ ಕರಾವಳಿ, ಮಲೆನಾಡು! ರೆಡ್​ ಅಲರ್ಟ್.. ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

author-image
Bheemappa
Updated On
ಮುಂದಿನ 4 ದಿನ ಈ ಭಾಗದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
Advertisment
  • ಧಾರಾಕಾರ ಮಳೆಯಿಂದ ಬಹುತೇಕ ಭರ್ತಿಯಾದ ಕದ್ರಾ ಜಲಾಶಯ
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ರೌದ್ರನರ್ತನದ ಸೌಂಡ್
  • ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಶಾಲೆ, ಕಾಲೇಜುಗಳಿಗೆ ರಜೆ

ಮಳೆ ಬಂದ್ರೆ ಇಳೆಗೆ ಜೀವ ಕಳೆ.. ರಾಜ್ಯದಲ್ಲಿ ಧೋ ಅಂತ ಸುರಿಯುತ್ತಿರೋ ವರುಣಾ ಮಲೆನಾಡನ್ನ ಮಳೆನಾಡಾಗಿ ಮಾಡಿ ಕರಾವಳಿ ಜನರನ್ನ ಕಂಗೆಡಿಸಿದ್ದಾನೆ. ಮಳೆ ಅಬ್ಬರಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಲೆನಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Advertisment

ವರುಣಾರ್ಭಟಕ್ಕೆ ಬೆಚ್ಚಿಬಿದ್ದ ಮಲೆನಾಡು, 2 ದಿನ ರೆಡ್​ ಅಲರ್ಟ್​

ಕಳೆದ ಬಾರಿ ಕೈಕೊಟ್ಟು ರಾಜ್ಯವನ್ನ ಕಂಗಾಲಾಗಿಸಿದ್ದ ಮಳೆರಾಯ. ಈ ಬಾರಿ ಆನ್​ ಡ್ಯೂಟಿ ಅಂತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ರೌದ್ರನರ್ತನದ ಸಪ್ಪಳ ಜೋರಾಗಿದ್ದು, ಕರಾವಳಿ-ಮಲೆನಾಡು ಭಾಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

publive-image

ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ 2 ದಿನಗಳ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಅಹಿತಕರ ಘಟನೆಗಳು ನಡೆಯದೇ ಇರಲಿ ಅಂತ ಇಂದು ಉಡುಪಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉ.ಕನ್ನಡ ಜಿಲ್ಲೆಯ 4 ತಾಲೂಕಿನ ಶಾಲಾ‌-ಕಾಲೇಜಿಗೆ ರಜೆ

ಉತ್ತರ ಕನ್ನಡದಲ್ಲೂ ವರುಣಾರ್ಭಟ ಜೋರಾಗಿದ್ದು 4 ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. 2 ದಿನ ಜಿಲ್ಲೆಯಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತ ಕ್ರಮವಾಗಿ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ‌-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನೂ ಹಲವೆಡೆ ಗುಡ್ಡ ಕುಸಿತ, ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರ ನೆರವಿಗೆ ಸಿದ್ಧವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಭರವಸೆ ನೀಡಿದ್ದಾರೆ.

Advertisment

‘ಜನರ ನೆರವಿಗೆ ಸಿದ್ಧವಿದ್ದೇವೆ’

ಅಲ್ಲಿ ಇಲ್ಲಿ ಅಂತ ಹೇಳುವುದಕ್ಕಿಂತ ಎಲ್ಲ ಕಡೆ ತುಂಬಾ ಮಳೆ ಆಗುತ್ತಿದೆ. ಇದರಿಂದ ಪ್ರವಾಹ, ಗುಡ್ಡ ಕಿಸಿತವಾಗುತ್ತಿವೆ. ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಇರಲು ಮಾಹಿತಿ ನೀಡಿದ್ದೇವೆ. ಎಲ್ಲ ಅಧಿಕಾರಿಗಳು ರಕ್ಷಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಮಂಕಾಳು ವೈದ್ಯ, ಸಚಿವ

ಕಾರವಾರದ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಕದ್ರಾ ಜಲಾಶಯ ಧಾರಾಕಾರ ಮಳೆಯಿಂದ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಲಾಶಯದಿಂದ ಸುಮಾರು 6 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗ್ತಿದೆ.

ಇದನ್ನೂ ಓದಿ: T20 ವಿಶ್ವಕಪ್​ ಗೆಲುವಿನ ಮಾಸ್ಟರ್ ಮೈಂಡ್​ಗಳು.. ಕೊಹ್ಲಿರನ್ನ ಓಪನಿಂಗ್ ಆಡಿಸಿ ಟ್ರೋಫಿ ಗೆದ್ದೇ ಬಿಟ್ರು!

Advertisment

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಕಾರಣ ಹಳ್ಳ-ಕೊಳ್ಳಗಳು ಉಕ್ಕಿಹರಿಯುತ್ತಿವೆ. ಪರಿಣಾಮ ಸೇತುವೆಗಳು ಜಲಾವೃತವಾಗುವ ಭೀತಿ ಎದುರಾಗಿದೆ. ಅಲ್ಲದೇ ನೀರಿನ ರಭಸಕ್ಕೆ ದಕ್ಷಿಣ ಕನ್ನಡದ ಬಳ್ಕುಂಜೆ- ಪಲಿಮಾರು ಸಂಪರ್ಕ ಸೇತುವೆ ಅಪಾಯಕ್ಕೆ ತುತ್ತಾಗಿದ್ದು ಸೇತುವೆ ಕಳೆಗೆ ಬಿರುಕುಗಳು ಮೂಡಿದೆ. ಸ್ಥಳೀಯರ ಮನವಿ ಮೇರೆಗೆ ಸೇತುವೆ ಮೇಲೆ ಘನ ವಾಹನ ಸಂಚಾರಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇಂದು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

publive-image

ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಕೃಷ್ಣೆ’!

ಬರದನಾಡು ಬೀದರ್​ ಮೇಲೆ ವರುಣಾ ಕೃಪೆ ತೋರಿದ್ದು. ಜಿಲ್ಲೆಯ ಹುಮನಾಬಾದ್, ಬಸವಕಲ್ಯಾಣ, ಭಾಲ್ಕಿ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಇನ್ನೂ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಕೃಷ್ಣ ನದಿ ತೀರದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ:ಅಬ್ಬಾ.. ಅಂಬಾನಿ ಸೊಸೆ ಧರಿಸಿದ್ದ ಲೆಹೆಂಗಾವೆಲ್ಲ ಅಪ್ಪಟ ಚಿನ್ನ.. ಚಿನ್ನ; ಇದರಲ್ಲಿರೋ ಶ್ಲೋಕದ ವಿಶೇಷತೆ ಏನು?

Advertisment

ಇನ್ನೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.. ಒಟ್ಟಾರೆ.. ಕರುನಾಡಿನಲ್ಲಿ ಕೊಂಚ ಲೇಟ್​ ಆದ್ರೂ ಮಳೆರಾಯ ಅಬ್ಬರ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment