/newsfirstlive-kannada/media/post_attachments/wp-content/uploads/2024/10/RAIN-SCHOOL-1.jpg)
ಬೆಂಗಳೂರು: ಸತತ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಹೊಳೆಯಂತಾದ ಬೆಂಗಳೂರು.. ಒಂದಾ, ಎರಡಾ, ಸಾಲು ಸಾಲು ಅವಾಂತರಗಳ ನಡುವೆ ಸಂಕಷ್ಟದಲ್ಲಿ ಜನರು
/newsfirstlive-kannada/media/post_attachments/wp-content/uploads/2024/10/RAIN-SCHOOL.jpg)
ಯಾರಿಗೆಲ್ಲ ರಜೆ ಇಲ್ಲ
- ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ
ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. - ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
- ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು
- ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ರಾತ್ರಿ ಅಷ್ಟೇ ಅಲ್ಲ, ಬೆಳ್ಳಂಬೆಳಗ್ಗೆ ಬೆಂಗಳರೂಲ್ಲಿ ಧಾರಾಕಾರ ಮಳೆ.. ಭಾರೀ ತೊಂದರೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us