/newsfirstlive-kannada/media/post_attachments/wp-content/uploads/2024/06/SCHOOL-RAIN.jpg)
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಇಂದಿನಿಂದ 3 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು, ಭರ್ಜರಿ ಮಳೆ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮಂಡ್ಯ, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಲ್ಲಿ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ರಾಮನಗರಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇದನ್ನೂ ಓದಿ:ಮುಂದಿನ 3 ದಿನ ರಾಜ್ಯದಲ್ಲಿ ಕಾಡಲಿದ್ದಾನೆ ಮಳೆರಾಯ.. ಹಲವು ಜಿಲ್ಲೆಗಳಿಗೆ ಅಲರ್ಟ್! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ