/newsfirstlive-kannada/media/post_attachments/wp-content/uploads/2024/07/Accident-14.jpg)
ಕೊಡಗು: ಸ್ಕೂಟರ್​​ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಪರಿಣಾಮ ಸ್ಕೂಟರ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಳೆಯಿಂದ ಮತ್ತೆ ನೆರೆ ಸೃಷ್ಟಿ! ಆಲಮಟ್ಟಿ, ಕೆಆರ್​ಎಸ್​ ಒಳಹರಿವು ಗಣನೀಯ ಏರಿಕೆ
ಮನು ಹಾಗೂ ರಕ್ಷಿತ್ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಗಳು. ಸ್ಕೂಟರ್​ ಸವಾರರು ವೇಗವಾಗಿ ಬಂದು ಟಿಪ್ಪರ್​ಗೆ ಗುದ್ದಿದ ಪರಿಣಾಮ ಸಾವನ್ನಪ್ಪಿದ್ದಾರೆ.
ಸ್ಕೂಟರ್ ಸವಾರರು ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದರು. ಟಿಪ್ಪರ್ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ