/newsfirstlive-kannada/media/post_attachments/wp-content/uploads/2024/08/MYS_DEAD_1.jpg)
ಮೈಸೂರು: ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲೂಕಿನ ಜಯಪ್ರಾರ್ಥನ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಹೂಟಗಳ್ಳಿಯ ದಕ್ಷ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ದ್ವಿತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಊಟದ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಮಾಹಿತಿ ತಿಳಿದು ಆಡಳಿತ ಮಂಡಳಿ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆ. ಆದರೆ ಈ ವಿಷಯ ಆಕೆಯ ಪೋಷಕರಿಗೆ ತಿಳಿಸಿಲ್ಲ. ಇಂದು ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಸಲ ವಿಚಾರ ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಬರುವುದಕ್ಕಿಂತ ಮೊದಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ವಿದ್ಯಾರ್ಥಿನಿ ಮೃತಪಟ್ಟರು ಆಡಳಿತ ಮಂಡಳಿ ವಿಷಯ ತಡವಾಗಿ ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ನಮ್ಮ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ