newsfirstkannada.com

BBMP ಅಧಿಕಾರಿಗಳ ಜೊತೆ ಸುರ್ಜೇವಾಲಾ ಮೀಟಿಂಗ್ ಮಾಡಿದ್ರಾ?; ಇದು 85% ಡೀಲ್‌ ಫಿಕ್ಸಿಂಗ್ ಸಭೆ ಎಂದ ಬಿಜೆಪಿ

Share :

13-06-2023

    ಕಾಂಗ್ರೆಸ್ ಸರ್ಕಾರ ಬಂದು ತಿಂಗಳಾಗುವುದರೊಳಗೆ ಹೊಸ ವಿವಾದ

    BBMP ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಭಾಗಿಯಾಗಿದ್ರಾ?

    ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಸಚಿವರು ಹಾಜರಿದ್ದ ಸಭೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದು ಇವತ್ತಿಗೆ ಸರಿಯಾಗಿ ಒಂದು ತಿಂಗಳು. ಎಲೆಕ್ಷನ್ ರಿಸಲ್ಟ್ ಬಂದ 7 ದಿನಕ್ಕೆ ಸಿಎಂ ಸಿದ್ದರಾಮಯ್ಯ ಹೊಸ ಸರ್ಕಾರವನ್ನು ರಚಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಭರವಸೆಗಳನ್ನು ಈಡೇರಿಸುವ ಉತ್ಸಾಹದಲ್ಲಿದೆ. ಈ ಬೆಳವಣಿಗೆಯ ಮಧ್ಯೆ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪವೊಂದು ಕೇಳಿ ಬಂದಿದೆ.

ಇವತ್ತು ಬೆಂಗಳೂರಿನ ಶಾಂಘ್ರಿಲಾ ಹೋಟೆಲ್‌ನಲ್ಲಿ ಬಿಬಿಎಂಪಿ ಉನ್ನತ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್‌, ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್ ಸಭೆ ನಡೆಸಿದ್ರು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾಗಿಯಾಗಿದ್ದು ವಿವಾದಕ್ಕೆ ಗುರಿಯಾಗಿದೆ. ಜನಪ್ರತಿನಿಧಿಯೂ ಅಲ್ಲದ, ರಾಜ್ಯ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ಹೊಂದಿರದ ವ್ಯಕ್ತಿ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದು ಯಾಕೆ ಎಂದು ಪ್ರಶ್ನಿಸಲಾಗಿದೆ.

ರಣದೀಪ್ ಸಿಂಗ್ ಸುರ್ಜೇವಾಲಾ ರಹಸ್ಯ ಸಭೆಯ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ. ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧ ಇವರಿಗಿಲ್ಲ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ..? ರಾಜ್ಯ ಬಿಜೆಪಿ ಘಟಕ ಪ್ರಶ್ನಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

BBMP ಅಧಿಕಾರಿಗಳ ಜೊತೆ ಸುರ್ಜೇವಾಲಾ ಮೀಟಿಂಗ್ ಮಾಡಿದ್ರಾ?; ಇದು 85% ಡೀಲ್‌ ಫಿಕ್ಸಿಂಗ್ ಸಭೆ ಎಂದ ಬಿಜೆಪಿ

https://newsfirstlive.com/wp-content/uploads/2023/06/congress-surjewala.jpg

Load More