/newsfirstlive-kannada/media/post_attachments/wp-content/uploads/2025/05/vij-accident4.jpg)
ವಿಜಯಪುರ: ಮಹೇಂದ್ರ ಟಿಯುವಿ 300 ಕಾರು, ಲಾರಿ, ಖಾಸಗಿ ಬಸ್ (VRL) ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ: ಜಸ್ಟ್ 7 ತಿಂಗಳಲ್ಲಿ 25 ಮದುವೆ.. 23 ವರ್ಷದ ಸುಂದರಿ ಸಂಚು ಬಾಲಿವುಡ್ ಸಿನಿಮಾನೂ ಮೀರಿಸಿದ ಸ್ಟೋರಿ!
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್ ಎಚ್ 50ರಲ್ಲಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಹಾಗೂ ಖಾಸಗಿ ಬಸ್ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ