/newsfirstlive-kannada/media/post_attachments/wp-content/uploads/2025/04/Ajay-Raj.jpg)
ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಹಿಟ್ಲರ್ ಕಲ್ಯಾಣ ಧಾರಾವಾಹಿಯ ನಟಿ ಪದ್ಮಿನಿ ದೇವನಹಳ್ಳಿ ಹಾಗೂ ಲಕ್ಷ್ಮೀ ನಿವಾಸ ಧಾರಾವಾಹಿಯ ನಟ ಅಜಯ್ ರಾಜ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರದಲ್ಲಿ ಆತಂಕದ ವಾತಾವರಣ.. ಏನಾಯ್ತು..?
ಹೌದು, ಹಿಟ್ಲರ್ ಕಲ್ಯಾಣ ಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದ ನಟಿ ಪದ್ಮಿನಿ ದೇವನಹಳ್ಳಿ ಅವರು ಗಂಡು ಮಗುವಿನ ಜನನ ನೀಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ನಟ ಹಾಗೂ ನಟಿಯರಾಗಿ ಮಿಂಚುತ್ತಿರೋ ಪದ್ಮಿನಿ ದೇವನಹಳ್ಳಿ ಹಾಗೂ ಅಜಯ್ ರಾಜ್ ಸದ್ಯ ಸಖತ್ ಖುಷಿಯಲ್ಲಿದ್ದಾರೆ.
View this post on Instagram
ಪದ್ಮಿನಿ ದೇವನಹಳ್ಳಿ ಏಪ್ರಿಲ್ 15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ವಿಚಾರವನ್ನು ನಟ ಅಜಯ್ ರಾಜ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ಇದೀಗ ಪೋಷಕರಾಗಿರೋ ಸಂಭ್ರಮದಲ್ಲಿದ್ದಾರೆ. ಇದೇ ವಿಚಾರ ತಿಳಿಯುತ್ತಿದ್ದಂತೆ ತಾಯಿ, ಮಗು ಆರೋಗ್ಯವಾಗಿರಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸದ್ಯ ನಟ ಅಜಯ್ ರಾಜ್ ಲಕ್ಷ್ಮೀ ನಿವಾಸ ಸೀರಿಯಲ್ನಲ್ಲಿ ಹರೀಶ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ