/newsfirstlive-kannada/media/media_files/2025/08/28/anushree4-2025-08-28-11-06-42.jpg)
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರು ಇಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್ ನಿರೂಪಕಿ ಅನುಶ್ರಿ-ರೋಷನ್; PHOTOS
ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ, ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು ಅನುಶ್ರೀ ಹಾಗೂ ರೋಷನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ