/newsfirstlive-kannada/media/media_files/2025/08/22/ramola3-2025-08-22-18-21-14.jpg)
ಕಿರುತೆರೆ ನಟಿ ರಮೋಲಾ ವಿರುದ್ಧ ದೂರು ದಾಖಲಾಗಿದೆ. ಹೌದು, ಕನ್ನಡ ಕಿರುತೆರೆ ನಟಿ ರಮೋಲಾ ಸಖತ್ ಫ್ಯಾಷನ್ ಪ್ರಿಯೆ. ಕನ್ನಡತಿ ಧಾರಾವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಫೇಮಸ್ ಆಗಿದ್ದ ನಟಿ ರಮೋಲಾ ವಿರುದ್ಧ ಈಗ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಯಾರಾರಿಗೆ ಎಷ್ಟೆಷ್ಟು ಕೋಟಿ ಕೊಟ್ರು?
ಕನ್ನಡತಿ, ಸೀತಾರಾಮ ಸೀರಿಯಲ್, ಭರ್ಜರಿ ಬ್ಯಾಚುಲರ್ಸ್ ಸೀಸನ್ 2ರ ಮೂಲಕ ಸಖತ್ ಫೇಮಸ್ ಆಗಿದ್ದರು ನಟಿ ರಮೋಲಾ. ಆದ್ರೆ ಈಗ ನಟಿ ರಮೋಲಾ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಾಗಿದೆ.
ಅಸಲಿಗೆ ಆಗಿದ್ದೇನು..?
ನಟಿ ರಮೋಲಾ ಅವರು ‘ರಿಚ್ಚಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಈಗ ಚಿತ್ರದ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕ ರಿಚ್ಚಿ ಅವರು ಈ ಬಗ್ಗೆ ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದಾರೆ. ಸಿನಿಮಾದ ಪ್ರಮೋಷನ್ಗೆ ರಮೋಲಾ ಬರುತ್ತಿಲ್ಲ, ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ʻರಿಚ್ಚಿʼ ಸಿನಿಮಾದಲ್ಲಿ ರಮೋಲಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಪ್ರಮೋಷನ್ಸ್ ಬನ್ನಿ ಎಂದರೆ ಬರುತ್ತಿಲ್ಲ ಎಂದು ನಿರ್ಮಾಪಕ ಹೇಮಂತ್ ರಿಚ್ಚಿ ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ