/newsfirstlive-kannada/media/media_files/2026/02/05/rajat-kishan-2026-02-05-10-18-37.jpg)
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಜತ್ ಅವರ ಈ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಏನಿದು ಘಟನೆ?
ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ರಜತ್ ಇತ್ತೀಚೆಗೆ ಫೋಟೋಶೂಟ್ ನಡೆಸಿದ್ದಾರೆ. ಕಾರಿನಿಂದ ಕೆಳಗಿಳಿದು ಕೈಯಲ್ಲಿ ಸಿಗರೇಟ್ ಹಿಡಿದು ಹೊಗೆ ಬಿಡುತ್ತಾ, ಯಾವುದೋ ಸಿನೆಮಾದ ವಿಲನ್ ರೀತಿ ಫೋಸ್ ನೀಡಿರುವ ವಿಡಿಯೋ ಹಾಗೂ ಫೋಟೋಗಳನ್ನು ರಜತ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರ ಎಂಬ ಸಾಮಾನ್ಯ ಜ್ಞಾನವಿದ್ದರೂ, ಕೇವಲ ಶೋಕಿಗಾಗಿ ಮತ್ತು ರೀಲ್ಸ್ ಪ್ರಚಾರಕ್ಕಾಗಿ ರಜತ್ ಈ ರೀತಿ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪಾರಂಪರಿಕ ಕಟ್ಟಡದ ಗರಿಮೆಗೆ ಧಕ್ಕೆ ತರುವಂತೆ ವರ್ತಿಸಿರುವುದು ಮೈಸೂರಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಜೈಲಿಗೆ ಹೋಗಿ ಬಂದರೂ ಬುದ್ಧಿ ಬಂದಿಲ್ವಾ?
ರಜತ್ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಶೂಟಿಂಗ್ ಸೆಟ್ ಒಂದರಲ್ಲಿ ಮಾರಕಾಸ್ತ್ರ (ಮಚ್ಚು) ಹಿಡಿದು ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿ ಪೊಲೀಸರು ಅವರನ್ನು ಬಂಧಿಸಿದ್ದರು. ಆ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಬಂದಿರುವ ರಜತ್, ಈಗ ಮತ್ತೆ ಇಂತಹ ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ.
"ಜೈಲಿಗೆ ಹೋಗಿ ಬಂದರೂ ಇವರಿಗೆ ಬುದ್ಧಿ ಬಂದಿಲ್ಲವೇ?" ಎಂದು ನೆಟ್ಟಿಗರು ಕಾಮೆಂಟ್ ಮೂಲಕ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸೆಲೆಬ್ರಿಟಿ ಎನಿಸಿಕೊಂಡವರು ಸಮಾಜಕ್ಕೆ ಮಾದರಿಯಾಗುವ ಬದಲು, ಕಾನೂನು ಉಲ್ಲಂಘಿಸಿ ಅದನ್ನು ಫೋಟೋಶೂಟ್ ಮೂಲಕ ಪ್ರದರ್ಶಿಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಈ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪಾರಂಪರಿಕ ತಾಣದಲ್ಲಿ ಧೂಮಪಾನ ಮಾಡಿ ಕಾನೂನು ಉಲ್ಲಂಘಿಸಿದ ರಜತ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಪ್ರಾಣಬಿಟ್ಟ ಮೂವರು ಮಹಿಳಾ ಕಾರ್ಮಿಕರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us