/newsfirstlive-kannada/media/media_files/2025/10/07/ashwini-and-rakshita-2025-10-07-11-18-09.jpg)
ರಾಮನಗರ: ಬಿಗ್​​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅವಮಾನಕಾರಿ ಆಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಆರೋಪದ ಮೇಲೆ ನಟ ಸುದೀಪ್ ಹಾಗೂ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.
ರಾಮನಗರ ಡಿವೈಎಸ್ಪಿ ಕಚೇರಿಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಪವಿತ್ರ ಅನ್ನೊರು ದೂರು ನೀಡಿದ್ದಾರೆ. ಸ್ಪರ್ಧಿ ಅಶ್ವಿನಿ ಗೌಡ ರಕ್ಷಿತಾ ಮೇಲೆ ಮಾನಹಾನಿಕರ ಪದ ಬಳಕೆ ಮಾಡಿದ್ದಾರೆ. ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ರಕ್ಷಿತಾಗೆ ಬೆದರಿಕೆ ಹಾಕುವ ರೀತಿ ಮಾತನಾಡಿದ್ದಾರೆ. ಇದೆಲ್ಲವನ್ನೂ ಕೂಡಾ ಖಾಸಗಿ ವಾಹಿನಿ ಪ್ರಸಾರ ಮಾಡಿ ರಕ್ಷಿತಾ ಮಾನಹಾನಿಯಾಗುವಂತೆ ಮಾಡಿದೆ.
ಅಲ್ಲದೇ ಸ್ಪರ್ಧಿ ರಿಷಾ, ಸಹಸ್ಪರ್ಧಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮದ ಮುಖ್ಯಸ್ಥರು ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಈ ಎಲ್ಲಾ ಅಂಶಗಳನ್ನ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us