/newsfirstlive-kannada/media/media_files/2026/01/22/big-boss-winner-gilli-met-cm-siddu-2026-01-22-15-45-49.jpg)
ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
ಬಿಗ್ ಬಾಸ್ ಸೀಸನ್ 12ರ ವಿಜೇಯ ಗಿಲ್ಲಿ ನಟ ಅಲಿಯಾಸ್ ನಟರಾಜು ಇಂದು ಬೆಂಗಳೂರಿನ ಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಗಿಲ್ಲಿ ನಟಗೆ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ. ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು.
/filters:format(webp)/newsfirstlive-kannada/media/media_files/2026/01/22/big-boss-winner-gilli-met-cm-siddu-1-2026-01-22-15-48-35.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us