/newsfirstlive-kannada/media/media_files/2025/08/17/priya-j-achar-2025-08-17-11-46-16.jpg)
ಕನ್ನಡದ ಕಿರುತೆರೆಯ ಗಟ್ಟಿಮೇಳ ಸೀರಿಯಲ್​ ಖ್ಯಾತಿಯ ನಟಿ ಪ್ರಿಯಾ ಜೆ ಆಚಾರ್ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಯಾವಾಗಲೂ ಸೀರೆ, ಲಂಗ ದಾವಣಿ ತೊಟ್ಟುಕೊಂಡು ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಈಗ ಬೇರೆಯೇ ಲುಕ್​ನಲ್ಲಿ ಕಣ್ಮನ ಸೆಳೆದಿದ್ದಾರೆ.
ಇದನ್ನೂ ಓದಿ:ಡಿವೋರ್ಸ್​ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?
/filters:format(webp)/newsfirstlive-kannada/media/media_files/2025/08/17/priya-j-achar2-2025-08-17-12-02-40.jpg)
ಪಾರು ಧಾರಾವಾಹಿ ಖ್ಯಾತಿಯ ಸಿದ್ದು ಮೂಲಿಮನಿ ಅವರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಕೊಂಚ ಬ್ರೇಕ್​ ತೆಗೆದುಕೊಂಡಿದ್ದರು. ಇದೀಗ ನಟಿ ಪ್ರಿಯಾ ಜೆ ಆಚಾರ್ ಮತ್ತೆ ಕಿರುತೆರೆ ಲೋಕಕ್ಕೆ ಕಾಲಿಟ್ಟಿದ್ದಾರೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಪ್ರೇಮಕಾವ್ಯ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2024/07/actress-priya.jpg)
ಇನ್ನೂ, ಸೀರಿಯಲ್​ ಜೊತೆ ಜೊತೆಗೆ ಸೋಷಿಯಲ್​ ಮೀಡಿಯಾದಲ್ಲಿ ನಟಿ ಪ್ರಿಯಾ ಅವರು ಸಿಕ್ಕಾಪಟ್ಟೆ ಌಕ್ಟೀವ್ ಆಗಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದ ನಟಿ ಈಗ ಕರ್ಲಿ ಕೇರ್​ನಲ್ಲಿ ಕ್ಯಾಮೆರಾ ಮುಂದೆ ಸೊಂಟ ಬಳುಕಿಸಿದ್ದಾರೆ.
/filters:format(webp)/newsfirstlive-kannada/media/media_files/2025/08/17/priya-j-achar1-2025-08-17-12-02-40.jpg)
ಕಣ್ಣಿಗೆ ಕುಲಿಂಗ್​ ಗ್ಲಾಸ್​, ತಲೆಗೆ ಹೇರ್ ಬ್ಯಾಂಡ್ ಹಾಕಿಕೊಂಡು ಫೋಟೋಗೆ ಮಾದಕ ಲುಕ್​ನಲ್ಲಿ ಕಂಗೊಳಿಸಿದ್ದಾರೆ. ನಟಿಯ ಹೊಸ ಅವತಾರಕ್ಕೆ ಫ್ಯಾನ್ಸ್​ ಕನ್ಫ್ಯೂಸ್ ಆಗಿದ್ದಾರೆ. ಸದ್ಯ ಇದೇ ವಿಡಿಯೋ ವೈರಲ್​ ಆಗುತ್ತಿದ್ದು, ನಟಿಯ ಬೋಲ್ಡ್​ ಲುಕ್​ಗೆ ಫ್ಯಾನ್ಸ್​ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ನಟಿ ಪ್ರಿಯಾ ಗಟ್ಟಿಮೇಳ ಧಾರಾವಾಹಿ ಮೂಲಕ ಅದಿತಿಯಾಗಿ ಕಿರುತೆರೆ ಲೋಕಕ್ಕೆ ಕಾಲಿಟ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಗಟ್ಟಿಮೇಳ ಧಾರಾವಾಹಿ ಜೊತೆಗೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಇದಾದ ಬಳಿಕ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಕಾವೇರಿ ಕನ್ನಡ ಮೀಡಿಯಂ ಧಾರಾವಾಹಿಯಲ್ಲಿ ಪ್ರಿಯಾ ನಟಿಸಿದ್ದರು. ಸದ್ಯ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಪ್ರೇಮಕಾವ್ಯ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us