ಕಿರುತೆರೆ ಲೋಕಕ್ಕೆ ನಾಯಕಿಯಾಗಿ ಮಹಾನಟಿ ಎಂಟ್ರಿ.. ರಾಜಕುಮಾರಿಯಾಗಿ ಮಿಂಚಲು ಸಜ್ಜಾದ ಗಗನಾ

ಮಹಾನಟಿ ಶೋನಲ್ಲಿ ಇರುವಾಗಲೇ ಲಕ್ಷ್ಮೀ ನಿವಾಸ ಸೀರಿಯಲ್​ನಲ್ಲಿ ನಟನೆ ಮಾಡೋದಕ್ಕೆ ಅವಕಾಶ ಸಿಕ್ಕಿತ್ತು. ಇದೀಗ ಹೊಚ್ಚ ಹೊಸ ಧಾರಾವಾಹಿಯಲ್ಲಿ ನಾಯಕ ನಟಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ.

author-image
Veenashree Gangani
mahanati gagana
Advertisment

ಮಹಾನಟಿ ರಿಯಾಲಿಟಿ ಶೋ ಮೂಲಕ ಫೇಮಸ್​ ಆಗಿರೋ ಗಗನಾ ಈಗ ನಟಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ. ಚಿತ್ರದುರ್ಗ ಮೂಲದ ಗಗನಾ ಮಹಾನಟಿಯಲ್ಲಿ ಮಿಂಚಿದ್ದರು. ತನ್ನ ಸಹಜ ಅಭಿನಯ, ಮುಗ್ಧ ನಟನೆಯ ಮೂಲಕವೇ ಅಭಿಮಾನಿಗಳನ್ನು ಸಂಪಾದಿಸಿಕೊಂಡರು.

ಇದನ್ನೂ ಓದಿ:ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದಲ್ಲಿ ಮತ್ತೆ ಎರಡು ಹುಲಿ ಮರಿಗಳು ದುರಂತ ಅಂತ್ಯ

publive-image

ಮಹಾನಟಿ ಶೋನಲ್ಲಿ ಇರುವಾಗಲೇ ಲಕ್ಷ್ಮೀ ನಿವಾಸ ಸೀರಿಯಲ್​ನಲ್ಲಿ ನಟನೆ ಮಾಡೋದಕ್ಕೆ ಅವಕಾಶ ಸಿಕ್ಕಿತ್ತು. ಇದೀಗ ಹೊಚ್ಚ ಹೊಸ ಧಾರಾವಾಹಿಯಲ್ಲಿ ನಾಯಕ ನಟಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ. ಹೌದು, ಹೊಸ ಚಾನೆಲ್​ನಲ್ಲಿ ಪ್ರಸಾರವಾಗಲಿರುವ ಸೀರಿಯಲ್​ಗೆ ಗಗನ ಅವರು ನಾಯಕಿಯಾಗಿ ಎಂಟ್ರಿ ಕೊಡಲಿದ್ದಾರೆ.

mahanati gagana(1)

ಮಹಾನಟಿ, ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​, ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನಲ್ಲಿ ಕಾಣಿಸಿಕೊಂಡಿದ್ದರು. ಈ ಬೆನ್ನಲ್ಲೇ ಹೊಚ್ಚ ಹೊಸ ಧಾರಾವಾಹಿಯಲ್ಲಿ ನಾಯಕಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ. ಇನ್ನೇನೂ ಸದ್ಯದಲ್ಲೇ ಝೀ ಪವರ್​ನಲ್ಲಿ ರಾಜಕುಮಾರಿ ಸೀರಿಯಲ್​ ಪ್ರಸಾರವಾಗಲಿದೆ. ಇದೇ ಸೀರಿಯಲ್​ ಫೋಟೋವೊಂದು ವೈರಲ್​ ಆಗಿದ್ದು, ಅದರಲ್ಲಿ ಗಗನಾ ಲಂಗಾ ದಾವಣಿಯಲ್ಲಿ ಕಂಗೊಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

mahanati gagana bhari
Advertisment