/newsfirstlive-kannada/media/media_files/2025/09/23/suhana-2025-09-23-12-40-49.jpg)
ಸರಿಗಮಪ ಸೀಸನ್ 13 ರ ಸ್ಪರ್ಧೆಯಾಗಿದ್ದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ರು. ಶೋ ನಲ್ಲಿ ಹಾಡಿದ ಹಲವು ಗೀತೆಗಳ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸರಾಗಿದ್ರು. ತಮ್ಮ ಬೋಲ್ಡ್ ಲುಕ್ಸ್ ಹಾಗೂ ಡೊಂಟ್ ಕೇರ್ ಸ್ವಭಾವದ ಮೂಲಕ ಸಾಕಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ ಸುಹಾನಾ.
ಸದ್ಯ ಮದುವೆಗೆ ಸಜ್ಜಗಿರೋ ಸುಹಾನಾ ತಮ್ಮ ಪ್ರೀತಿಯ ಗುಟ್ಟು ಬಿಚ್ಚಿಟ್ಟಿದ್ದಾರೆ. ಬಹುಕಾಲದ ಗೆಳೆಯ ನಿತಿನ್ ಎಂಬುವವರನ್ನ ವರಿಸಲಿದ್ದಾರೆ ಸುಹಾನಾ. ಸುಹಾನಾ ಮದುವೆ ಆಗ್ತಿರೋ ಹುಡುಗ ನಿತಿನ್ ಶಿವಾಂಶ್. ರಂಗಭೂಮಿ ಕಲಾವಿದರು. ಪ್ರಸಿದ್ಧ ರಂಗ ತರಬೇತಿ ಕೇಂದ್ರ ನೀನಾಸಂನಲ್ಲಿ ತರಬೇತಿ ಪಡೆದಿದ್ದಾರೆ. ಇವರದ್ದು ಪ್ರೇಮ ವಿವಾಹ. 16 ವರ್ಷಗಳ ಸುದೀರ್ಘ ಸ್ನೇಹ ಪ್ರೀತಿ ಕಾರಣ ವಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪ್ರೀತಿಯ ವಿಷಯವನ್ನು ಸುಹಾನಾ ಮುಕ್ತವಾಗಿ ಹಂಚಿಕೊಂಡಿದ್ದಾರೆ.
ಪರಸ್ಪರ ಪ್ರೀತಿ ಇದೆ ಸಾಕು. ನಮ್ಮ ನಂಬಿಕೆಗಳು ಮುಂದುವರಿಯಲಿದೆ, ಬದಲಾಗುವ ಅವಶ್ಯಕತೆ ಇಲ್ಲ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮ ಆಶೀರ್ವಾದವಿರಲಿ ಎಂದು ಸುಹಾನಾ ಬರೆದುಕೊಂಡಿದ್ದಾರೆ.
ಸುಹಾನಾ ಸಯ್ಯದ್ ಹಾಗೂ ನಿತಿನ್ ಶಿವಾನಂಶುಗೆ ಶುಭಾಶಯಗಳ ಮಹಪೂರವೇ ಹರಿದು ಬರ್ತಿದೆ.
ಇದನ್ನೂ ಓದಿ : Breaking: ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!