newsfirstkannada.com

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ

Share :

07-09-2023

  ಡಿಸಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ

  ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ!

  ರೋಹಿಣಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಪತ್ರ ಬರೆದ ಅಧಿಕಾರಿ

ಮೈಸೂರು: ಹಲವು ತಿಂಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ನಡುವಿನ ಜಟಾಪಟಿ ಭಾರಿ ಸದ್ದು ಮಾಡಿತ್ತು. ಅದರಲ್ಲೂ ಈ ಇಬ್ಬರ ಮಧ್ಯೆ ನಡೆದ ಬೀದಿ ಜಗಳವೂ ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಈಗ ಮತ್ತೆ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ನಿಯಮ ಉಲ್ಲಂಘಿಸಿದ್ದರು ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ. ಸದಾ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿಯಾಗೋ ರೋಹಿಣಿ ಈಗ ಹಗರಣ ನಡೆಸಿದ್ದಾರೆ ಎನ್ನುವ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ.

ಡಿಸಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯನ್ನು ಹಣಕಾಸು ಇಲಾಖೆಯ ಅನುಮತಿ ಪಡೆಯದೇ ರೋಹಿಣಿ ಹಗರಣ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ನಿಯಮಗಳನ್ನು ಮೀರಿ ಹಣಕಾಸು ಇಲಾಖೆ ಅನುಮತಿ ಪಡೆಯದೇ ದುಡ್ಡು ಖರ್ಚು ಮಾಡಿರೋ ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಪಿಎಆರ್​​ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ

https://newsfirstlive.com/wp-content/uploads/2023/09/Sindhuri.jpg

Load More