Advertisment

ಹಾಸನದಲ್ಲಿ ಪ್ರಜ್ವಲ್ ಬಳಿಕ ಸೂರಜ್ ರೇವಣ್ಣಗೂ ಬಿಗ್ ಶಾಕ್‌! ಆರೋಪವೇನು? ಏನಿದರ ಅಸಲಿಯತ್ತು?

author-image
Veena Gangani
Updated On
ಹಾಸನದಲ್ಲಿ ಪ್ರಜ್ವಲ್ ಬಳಿಕ ಸೂರಜ್ ರೇವಣ್ಣಗೂ ಬಿಗ್ ಶಾಕ್‌! ಆರೋಪವೇನು? ಏನಿದರ ಅಸಲಿಯತ್ತು?
Advertisment
  • ಹಾಸನ ಗನ್ನಿಕಡದ ತೋಟದ ಮನೆಗೆ ಯುವಕ ಬಂದ ಮೇಲೆ ಏನಾಯ್ತು?
  • ಸೂರಜ್ ರೇವಣ್ಣ ವಿರುದ್ಧ ದೂರು ಕೊಟ್ಟಿರುವ ಸಂತ್ರಸ್ತ ಯುವಕ ಯಾರು?
  • ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಕೊಟ್ಟ ದೂರಿನಲ್ಲಿ ಹೊಸ ಟ್ವಿಸ್ಟ್!

ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿರಿಯ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದು ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವಾಗಲೇ ರೇವಣ್ಣ ಅವರ ಹಿರಿಯ ಮಗ ಸೂರಜ್‌ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ.

Advertisment

ಇದನ್ನೂ ಓದಿ: ಪುರುಷತ್ವ ಪರೀಕ್ಷೆಗೆ ಹೋಗಲು ಜಡ್ಜ್ ಮುಂದೆ ಪ್ರಜ್ವಲ್ ರೇವಣ್ಣ ಅಳಲು; ಕೇಳಿಕೊಂಡಿದ್ದೇನು? 

ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಅಷ್ಟೇ ಅಲ್ಲ ಆರೋಪ ಮಾಡಿದ ಸಂತ್ರಸ್ತನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಅವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

publive-image

ಏನಿದು ಪ್ರಕರಣ?
ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಅವರ ಬಳಿ ಅರಕಲಗೂಡು ಮೂಲದ ಯುವಕ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಯುವಕ ಕೇಳಿಕೊಂಡಿದ್ದನಂತೆ. ಆಗ ಶಿವಕುಮಾರ್ ಅವರು ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೋನ್ ನಂಬರ್ ಕೊಟ್ಟಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisment

ಕಳೆದ ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಸಂತ್ರಸ್ತ ಯುವಕ ಕೆಲಸ ಕೇಳಲು ಹೋಗಿದ್ದಾರೆ. ಕೆಲಸ ಕೇಳಿ ವಾಪಸ್‌ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೊದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನೀನು ಕೆಲಸ ಕೊಡಿಸಲ್ಲ. ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ 5 ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾರಂತೆ. ಈ ವಿಚಾರವನ್ನು ಶಿವಕುಮಾರ್ ಅವರು ಸೂರಜ್ ರೇವಣ್ಣ ಅವರಿಗೆ ತಿಳಿಸಿದ್ದಾರೆ.

ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನ ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ಶಿವಕುಮಾರ್ ಅವರು ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ:HDK ವಿರುದ್ಧ ನಾಲಿಗೆ ಹರಿಬಿಟ್ಟ ದರ್ಶನ್ ಮಹಿಳಾ ಅಭಿಮಾನಿಗೆ ಸಂಕಷ್ಟ; ಆಗಿದ್ದೇನು?

Advertisment

ಸಂತ್ರಸ್ತ ಯುವಕ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದಿದ್ದ. ಲೀಗಲ್ ಕೇಸ್ ಸೀಲ್ ಇರೋ ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಲಾಗಿದೆ.

ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡೋರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಅವರ ಈ ದೂರು ಆದರಿಸಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment