ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣೆಗೆ ನಿಲ್ಲುವಂತಿಲ್ಲ
2 ವರ್ಷ ಜೈಲು ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಕಾರ
ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸದ್ಯಕ್ಕೆ ರಿಲೀಫ್ ಇಲ್ಲ. ಮೋದಿ ಸರ್ನೇಮ್ ಪ್ರಕರಣದಲ್ಲಿ ಪ್ರಕಟವಾಗಿದ್ದ ಜೈಲು ಶಿಕ್ಷೆಗೆ ಹಾಗೂ ಸಂಸತ್ ಸದಸ್ಯತ್ವ ರದ್ದು ಮಾಡಿರೋದಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ. ಜೊತೆಗೆ ಕೆಳ ನ್ಯಾಯಾಲಯದ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
ರಾಹುಲ್ ಗಾಂಧಿಗೆ ಮುಂದಿನ ದಾರಿ ಏನು..?
ಕೋರ್ಟ್ ತೀರ್ಪಿನಿಂದ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶವಿಲ್ಲ. ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆಯೂ ರದ್ದಾಗಲ್ಲ. ಹೈಕೋರ್ಟ್ ಆದೇಶದ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ. ಜೆಎಂಎಫ್ಸಿ ಕೋರ್ಟ್ ಶಿಕ್ಷೆ ವಿಧಿಸಿ ನೀಡಿರುವ ಆದೇಶ ಸೂಕ್ತವಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶದ ಅಗತ್ಯವಿಲ್ಲ. ರಾಹುಲ್ ಗಾಂಧಿಯ ವಿರುದ್ಧ ಕನಿಷ್ಠ ಹತ್ತು ಕ್ರಿಮಿನಲ್ ಕೇಸ್ ದೇಶಾದ್ಯಂತ ಪೆಂಡಿಂಗ್ ಇವೆ ಎಂದು ಹೈಕೋರ್ಟ್ ಇದೇ ವೇಳೆ ಹೇಳಿದೆ.
ಏನಿದು ಕೇಸ್..?
ಕೋರ್ಟ್ ತೀರ್ಪು ಬೆನ್ನಲ್ಲೇ ರಾಹುಲ್ ಗಾಂಧಿಯ ಸಂಸದ ಸ್ಥಾನದ ಅನರ್ಹತೆಯೂ ಮುಂದುವರಿಯಲಿದೆ. 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ, ಕರ್ನಾಟಕದ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದ್ದರು. ಎಲ್ಲಾ ಕಳ್ಳರ ಉಪನಾಮ ಮೋದಿ ಎಂದು ಹೇಗೆ ಬರುತ್ತದೆ ಅಂತಾ ಪ್ರಶ್ನೆ ಮಾಡಿದ್ದರು. ರಾಹುಲ್ ಗಾಂಧಿಯ ಈ ಹೇಳಿಕೆ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಾಗಿತ್ತು.
ವಿಚಾರಣೆ ನಡೆಸಿದ್ದ ಸೂರತ್‌ನ ಸಿಜೆಎಂ (Surat Chief Judicial Magistrate) ಕೋರ್ಟ್, ರಾಹುಲ್ ಗಾಂಧಿಗೆ ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿ, ದಂಡ ಕೂಡ ವಿಧಿಸಿತ್ತು. ಈ ತೀರ್ಪು ಬೆನ್ನಲ್ಲೇ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವೂ ರದ್ದಾಗಿತ್ತು. ಸಿಜೆಎಂ ಕೋರ್ಟ್ನ ತೀರ್ಪನ್ನು ರಾಹುಲ್ ಗಾಂಧಿ, ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಕೋರ್ಟ್ ತೀರ್ಪನ್ನು ಪರಿಶೀಲಿಸಿ, ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಏಪ್ರಿಲ್ 25 ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ