/newsfirstlive-kannada/media/post_attachments/wp-content/uploads/2024/04/AUTO.jpg)
ಪಾಟ್ನಾದ ಕಂಕರ್‌ಬಾಗ್ ಬೈಪಾಸ್ ಬಳಿ ಕ್ರೇನ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಬ್ರೇಕ್ ಫೇಲ್, ಬೆಳಗಾವಿಯಲ್ಲಿ 20 ಪ್ರಯಾಣಿಕರಿದ್ದ ರಾಜಹಂಸ ಬಸ್​ ಪಲ್ಟಿ
ಬೆಳಗ್ಗೆ 3.44 ರ ಸುಮಾರಿಗೆ ಮಿಥಾಪುರದಿಂದ ಝೀರೋ ಮೈಲ್ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ, ಮೊಟ್ರೋ ಕಾಮಗಾರಿಯಲ್ಲಿ ನಿರತವಾಗಿದ್ದ ಕ್ರೇನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಅಪಘಾತದ ಬಳಿಕ ಕ್ರೇನ್ ಮತ್ತು ಆಟೋ ರಿಕ್ಷಾ ಚಾಲಕ ತಮ್ಮ ವಾಹನಗಳೊಂದಿಗೆ ಪರಾರಿಯಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಇಂದು ದ್ವಾರಕೀಶ್​​ ಅಂತ್ಯಕ್ರಿಯೆ, ಅಂತಿಮ ದರ್ಶನ ಎಲ್ಲಿ ನಡೆಯುತ್ತಿದೆ?
ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಅಪಘಾತದ ಭೀಕರತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಪಾಟ್ನಾದ ಸೆಂಟ್ರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ ಎಂದು ಸಂಚಾರಿ ವಿಭಾಗದ ಎಸ್​ಪಿ ಅಶೋಕ್ ಕುಮಾರ್ ಚೌಧರಿ ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಮುಕೇಶ್ ಕುಮಾರ್ ಎಂಬಾತ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us