ಉಚಿತ ಬಸ್ ಪ್ರಯಾಣ ರದ್ದಾಗುತ್ತದೆಂಬ ಮೆಸೇಜ್ಗಳು!
ಯೋಜನೆಯ ಸುದ್ದಿ ಕೇಳಿ ಮಹಿಳೆಯರಲ್ಲಿ ಹೆಚ್ಚಿದ ಆತಂಕ
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡೋ ಸುದ್ದಿ ಯಾವುವು?
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ರದ್ದಾಗುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಇಲಾಖೆ ಸ್ಪಷ್ಟನೆ ನೀಡಿದ್ದು ಶಕ್ತಿ ಯೋಜನೆ ರದ್ದು ಮಾಡುವಂತ ಉದ್ದೇಶ ಇಲ್ಲವೇ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಕೆಎಸ್‌ಆರ್‌ಟಿಸಿ ಇಲಾಖೆ ತನ್ನ ಅಧಿಕೃತ ಟ್ವೀಟರ್ ಅಕೌಂಟ್ನಲ್ಲಿ ಫೋಟೋ ಶೇರ್ ಮಾಡಿ, ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಪ್ರಯಾಣ ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಇಂತಹ ಗೊಂದಲದ ಸುದ್ದಿಗಳಿಗೆ ಪ್ರಯಾಣಿಕರು ನಂಬಬಾರದು. ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆ ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡವೆಂದು ತಿಳಿಸಿದೆ.
ಅಲ್ಲದೇ ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿ ನೀಡುತ್ತಿರುತ್ತೇವೆ. ಉಚಿತ ಬಸ್ ಪ್ರಯಾಣವು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಆ ಸುಳ್ಳು ಸುದ್ದಿಗಳು ಯಾವ್ಯಾವು.?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶಕ್ತಿ ಯೋಜನೆ ಕುರಿತು ಸ್ಪಷ್ಟೀಕರಣ: pic.twitter.com/dOkr6IWyoS
— KSRTC (@KSRTC_Journeys) August 16, 2023