/newsfirstlive-kannada/media/post_attachments/wp-content/uploads/2024/07/shamitha.jpg)
ರೇಣುಕಾಸ್ವಾಮಿ ಕೊಲೆ ಕೇಸ್ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲು ಪಾಲಾಗಿದ್ದಾರೆ. 17 ಆರೋಪಿಗಳಲ್ಲಿ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಉಳಿದ 3 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಅಮ್ಮ, ತಮ್ಮನನ್ನು ಕಂಡು ದರ್ಶನ್ ಕಣ್ಣೀರು.. 45 ನಿಮಿಷಗಳ ಕಾಲ ಜೈಲಿನಲ್ಲಿ ಏನು ಮಾತನಾಡಿದ್ರು ಗೊತ್ತಾ?
ಕೊಲೆ ಕೇಸ್ನಲ್ಲಿ ಆರೋಪಿಗಳು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಆದರೆ ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧಗಳ ಬಗ್ಗೆ ಚರ್ಚೆಯಾಗುತ್ತಿವೆ. ನಟ ದರ್ಶನ್ ಜೈಲು ಸೇರುತ್ತಿದ್ದಂತೆ ಹಲವಾರು ನಟ ನಟಿಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಎ2 ಆರೋಪಿ ದರ್ಶನ್ ಪರವಾಗಿ ಗಾಯಕಿ, ಸಂಗೀತ ನಿರ್ದೇಶಕಿ ಡಾ ಶಮಿತಾ ಮಲ್ನಾಡ್ ಅವರು ಈ ಬಗ್ಗೆ ನ್ಯೂಸ್ ಫಸ್ಟ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಮಾತಾಡಿದ ಅವರು, ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಬೇರೆ ಯಾವ ವಿಚಾರದಲ್ಲಿ ಅಸಮಧಾನ ಇಲ್ಲ. ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಮಧ್ಯೆ ಯಾರು ಬರೋಕೆ ಸಾಧ್ಯನೇ ಇಲ್ಲ. ದರ್ಶನ್, ವಿಜಯಲಕ್ಷ್ಮಿ ಹಾಗೂ ವಿನೀಶ್ ಮಾತ್ರ ಇರೋದು. ಆದರೆ ಕೆಲವೊಂದು ಬಾರಿ ಸುಮ್ಮನೆ ಸಹಾಯ ಮಾಡೋಕೆ ಹೋಗಿ ಸಿಕ್ಕಿಹಾಕಿಕೊಂಡಿರೋ ಸಾಧ್ಯತೆ ಇದೆ. ಕೆಲವೊಮ್ಮೆ ನಾವು ಅಂದುಕೊಂಡ ಹಾಗೇ ನಡೆದಿರೋದಿಲ್ಲ. ಅವರ ಇಬ್ಬರ ನಡುವೆ ಮೂರನೇ ವ್ಯಕ್ತಿಗಳು ಚಾಲೆಂಜಿಂಗ್ ಸ್ಟಾರ್ ಆದ ಮೇಲೆ ಬಂದವರು. ಹೀಗಾಗಿ ಅವರ ಲೈಫ್ನಲ್ಲಿ ಮೂರನೇ ವ್ಯಕ್ತಿಗಳಿಗೆ ಜಾಗವಿಲ್ಲ. ದರ್ಶನ್ ಹಾಗೂ ವಿಜಯಲಕ್ಷ್ಮಿ ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಆದಷ್ಟೂ ಬೇಗ ದರ್ಶನ್ ಅವರು ನಿರಪರಾಧಿಯಾಗಿ ಆಚೆ ಬರಲಿ ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ