/newsfirstlive-kannada/media/post_attachments/wp-content/uploads/2024/10/sharavana.jpg)
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ನಿಧನರಾಗಿದ್ದಾರೆ. ಸುದೀಪ್ ತಾಯಿ ಸರೋಜರವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಹೀಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯನ್ನು ತಬ್ಬಿ ಅತ್ತ ಸುದೀಪ್.. ಅಮ್ಮನನ್ನು ಕಳೆದುಕೊಂಡ ಮಾಣಿಕ್ಯ
ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಿಚ್ಚ ಸುದೀಪ್ ತಾಯಿ ಇಂದು ಬೆಳಗ್ಗೆ 7:04 ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಇನ್ನೂ ನಟ ಸುದೀಪ್ ಅವರ ತಾಯಿ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಯಾಂಡಲ್ವುಡ್ ನಟ ಹಾಗೂ ನಟಿಯರು, ರಾಜಕೀಯ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಇದರ ಜೊತೆಗೆ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
Heartfelt sympathies to @KicchaSudeep Sir and family on the demise of Saroja amma ?
Stay strong sir #RIPpic.twitter.com/hQvqH8MQ8b— Sharavana TA (@SharavanaTa)
Heartfelt sympathies to @KicchaSudeep Sir and family on the demise of Saroja amma 💔
Stay strong sir #RIPpic.twitter.com/hQvqH8MQ8b— Sharavana TA (@SharavanaTa) October 20, 2024
">October 20, 2024
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡ ಅವರು, ಸರೋಜಾ ಅಮ್ಮನವರ ನಿಧನಕ್ಕೆ ಕಿಚ್ಚ ಸುದೀಪ್ ಸರ್ ಮತ್ತು ಕುಟುಂಬದವರಿಗೆ ಹೃದಯಪೂರ್ವಕ ಸಂತಾಪಗಳು. ಗಟ್ಟಿಯಾಗಿ ಇರಿ ಸರ್ ಅಂತ ಧೈರ್ಯ ತುಂಬಿದ್ದಾರೆ. ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ನಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನೆರವೇರಿದೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸಂಪ್ರದಾಯದಂತೆ ಪೂಜೆ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸುದೀಪ್ ಹಾಗೂ ಕುಟುಂಬಸ್ಥರು ತಾಯಿಗೆ ಅಂತಿಮ ವಿದಾಯ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ