/newsfirstlive-kannada/media/post_attachments/wp-content/uploads/2025/03/Shardul-Thakur.jpg)
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಈಗಾಗಲೇ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಟೀಮ್ ಗೆದ್ದು ಬೀಗಿದೆ. ಇಂದು ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡುತ್ತಿವೆ. ಇದರ ಮಧ್ಯೆ ಐಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದ ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ಗೆ ಜಾಕ್ಪಾಟ್ ಹೊಡೆದಿದೆ.
ಲಕ್ನೋ ತಂಡಕ್ಕೆ ಶಾರ್ದೂಲ್ ಠಾಕೂರ್ ಎಂಟ್ರಿ
ಇನ್ನು, ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ವೇಗಿ ಮೊಹ್ಸಿನ್ ಖಾನ್ ಗಾಯಕ್ಕೆ ತುತ್ತಾಗಿದ್ದಾರೆ. ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿರೋ ಇವರು ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗಕ್ಕೆ ಶಾರ್ದೂಲ್ ಠಾಕೂರ್ ಬಂದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಸೌದಿಯಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದ ಆಟಗಾರ ಶಾರ್ದೂಲ್ ಠಾಕೂರ್. ಒಂದು ಟೈಮ್ನಲ್ಲಿ ಭಾರೀ ಹೆಸರು ಮಾಡಿದ್ದ ಇವರನ್ನು ಯಾವ ಫ್ರಾಂಚೈಸಿ ಕೂಡ ಖರೀದಿ ಮಾಡಿರಲಿಲ್ಲ. ಇಷ್ಟಾದ್ರೂ ಶಾರ್ದೂಲ್ ಠಾಕೂರ್ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದರು.
ಟ್ರೈನಿಂಗ್ ಕ್ಯಾಂಪ್ನಲ್ಲಿ ಶಾರ್ದೂಲ್ ಠಾಕೂರ್
ಸದ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರರು ಟ್ರೈನಿಂಗ್ ಕ್ಯಾಂಪ್ನಲ್ಲಿದ್ದಾರೆ. ಇವರ ಜೊತೆಗೆ ಕ್ಯಾಂಪ್ನಲ್ಲಿ ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಶಾರ್ದೂಲ್ ಬೌಲಿಂಗ್ ಮಾಡುತ್ತಿರೋದು ಕಂಡು ಬಂದಿದೆ.
ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ 95 ಪಂದ್ಯ ಆಡಿದ್ದಾರೆ. ಸುಮಾರು 67 ವಿಕೆಟ್ ತೆಗೆದಿದ್ದು, ಜತೆಗೆ 307 ರನ್ ಸಿಡಿಸಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಕೂಡ ಇದೆ. ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.
ಇದನ್ನೂ ಓದಿ:ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಆರ್ಸಿಬಿ; 7 ವಿಕೆಟ್ಗಳ ಭರ್ಜರಿ ಗೆಲುವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ