/newsfirstlive-kannada/media/post_attachments/wp-content/uploads/2025/06/Shefali_Jariwala_3.jpg)
ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ (Cardiac Arrest)ದಿಂದ ನಿಧನ ಹೊಂದಿದ್ದಾರೆ. ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‌ನ ನಟ, ನಟಿಯರು ಬಿಗ್ ಶಾಕ್ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು.
ಬಾಲಿವುಡ್ ನಟಿ ಶೆಫಾಲಿ ಜರಿವಾಲಾ (42) ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆ (Bellevue Hospital)ಗೆ ದಾಖಲು ಮಾಡಲು ಕರೆದುಕೊಂಡು ಹೋಗಲಾಗಿತ್ತು. ಆದರೆ ಆದಾಗಲೇ ನಟಿಯ ಉಸಿರು ನಿಂತು ಹೋಗಿದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.
ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೂ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ.
2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ರಿಂಕು ಸಿಂಗ್ ಓದಿದ್ದು 9ನೇ ತರಗತಿ.. ಆದರೂ ಬೇಸಿಕ್ ಶಿಕ್ಷಣ ಅಧಿಕಾರಿಯಾಗಿ ನೇಮಕ!
ಶೆಫಾಲಿ ಜರಿವಾಲಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಇನ್ನು 1964ರಲ್ಲಿ ಬಿಡುಗಡೆಯಾದ ಸಂಜೋತಾ ಸಿನಿಮಾದ ಪ್ರಸಿದ್ಧ ಹಾಡನ್ನು ಮರುಸೃಷ್ಟಿಸಲಾಗಿತ್ತು. ಈ ಹಾಡನ್ನು ಲತಾ ಮಂಗೇಶ್ಕರ್ ಅವರು ಹಾಡಿದ್ದು ಕಲ್ಯಾಣ್‌ಜಿ- ಆನಂದ್‌ಜಿ ಸಂಗೀತ ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ