/newsfirstlive-kannada/media/post_attachments/wp-content/uploads/2024/07/hassan.jpg)
ಹಾಸನ: ಮಳೆಯ ರಣಾರ್ಭಟದಿಂದ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದು 5 ಜನರು ಸಾವನ್ನಪ್ಪಿದ್ದಾರೆ. 12ರಿಂದ 15 ಜನರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆಂಬ ಶಂಕೆಯಿದೆ. ಸದ್ಯ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಶಿರಾಡಿ ಘಾಟ್ ರಸ್ತೆಯಲ್ಲಿ ಇಂತಹದೇ ದುರ್ಘಟನೆ ನಡೆದಿದೆ. ಏಕಾಏಕಿ ಮಣ್ಣು ಗುಡ್ಡ ಕುಸಿದಿದೆ. ಪರಿಣಾಮ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.
/newsfirstlive-kannada/media/post_attachments/wp-content/uploads/2024/07/NH75-1.jpg)
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಮಳೆಯ ಅಬ್ಬರದಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
/newsfirstlive-kannada/media/post_attachments/wp-content/uploads/2024/07/NH75.jpg)
ಇದನ್ನೂ ಓದಿ: ದರ್ಶನ್ 14 ದಿನಗಳ ನ್ಯಾಯಾಂಗ ಬಂಧನ ಅಂತ್ಯ.. ಅಂದುಕೊಂಡಿದ್ದ ಬೇಡಿಕೆಗಳಿಂದು ಈಡೇರುತ್ತಾ?
KA-17 M 5003 ನಂಬರ್‌ನ ಓಮ್ನಿ ಕಾರು ಮಣ್ಣಿನಡಿ ಸಿಲುಕಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us