BIG BREAKING: ಬಿಜೆಪಿ ಪಕ್ಷದಿಂದ ಇಬ್ಬರು ಶಾಸಕರ ಉಚ್ಛಾಟನೆ; ಹೈಕಮಾಂಡ್ ಆದೇಶ

author-image
admin
Updated On
S.T ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ಗೆ BJP ಗೇಟ್‌ಪಾಸ್‌ ಯಾಕೆ? ಅಸಲಿ ಕಾರಣಗಳು ಇಲ್ಲಿದೆ!
Advertisment
  • ರಾಜ್ಯ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆ
  • ಿಬಿಜೆಪಿ ಶಾಸಕರಾದ ಎಸ್​.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್
  • ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಉಚ್ಛಾಟನೆ ಮಾಡಿ ಆದೇಶ

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಹೈಕಮಾಂಡ್‌ ಹಾಲಿ ಶಾಸಕರಾದ ಎಸ್​.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ 25ರ ಒಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು. ನೋಟಿಸ್‌ಗೆ ಉತ್ತರಿಸುವ ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ.

publive-image

ಉಚ್ಛಾಟನೆಗೆ ಕಾರಣವೇನು?
ಯಶವಂತಪುರ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕರಾದ ಶಿವರಾಮ್ ಹೆಬ್ಬಾರ್ ಅವರ ಮೇಲೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ನನಗೆ ಊಟ ಮಾಡಿಸ್ತಾ ಇದ್ದಳು​.. ದುಡ್ಡು ಬೇಡ ಸರ್; ಸಚಿವ ಚಲುವರಾಯಸ್ವಾಮಿ ಮುಂದೆ ತಂದೆ ಕಣ್ಣೀರು 

ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇಂದಿನಿಂದ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತುಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment