newsfirstkannada.com

ಅಣ್ಣಾಮಲೈ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌; ಮೋದಿ ಕ್ಯಾಬಿನೆಟ್‌ನಲ್ಲಿ ಚಾನ್ಸ್‌ ಮಿಸ್‌? ಕಾರಣವೇನು?

Share :

Published June 9, 2024 at 6:26pm

    ರಾಷ್ಟ್ರಪತಿ ಭವನದಲ್ಲಿ ಒಟ್ಟು 65 ಮಂದಿ ಸಚಿವರಾಗಿ ಪ್ರಮಾಣವಚನ

    ಕೆ. ಅಣ್ಣಾಮಲೈ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗೋದು ಪಕ್ಕಾನಾ?

    ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಖಾತೆ ತೆರೆಯಲು ಬಿಜೆಪಿ ಭಾರೀ ಕಸರತ್ತು

ನವದೆಹಲಿ: ಸತತ 3ನೇ ಬಾರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಿ ಪದಗ್ರಹಣ ಮಾಡಲು ಸಜ್ಜಾಗಿದ್ದಾರೆ. ಕೆಲವೇ ಕ್ಷಣದಲ್ಲಿ ರಾಷ್ಟ್ರಪತಿ ಭವನದಲ್ಲಿ ನೂತನ NDA ಸರ್ಕಾರದ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಿಪಿಯಿಂದ 53, ಮಿತ್ರಪಕ್ಷಗಳಿಂದ 12 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ಒಟ್ಟು 65 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ನೂತನ ಕೇಂದ್ರ ಸಚಿವರಾಗುತ್ತಿರುವ 65 ಮಂದಿ ಯಾರು ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಈ ಕುತೂಹಲಕ್ಕೆ ಕೆಲವೇ ಗಂಟೆಯಲ್ಲಿ ಉತ್ತರ ಸಿಗಲಿದೆ.

ಇಂದು ಬೆಳಗ್ಗೆ ದೆಹಲಿಯಿಂದ ಬಂದ ಮಾಹಿತಿ ಪ್ರಕಾರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕೂಡ ಮೋದಿ 3.0 ಕ್ಯಾಬಿನೆಟ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ ಅಣ್ಣಾಮಲೈ ಅವರನ್ನು ಸದ್ಯಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳುವುದು ಅನುಮಾನವಾಗಿದೆ.

ಕೊಯಮತ್ತೂರು ಲೋಕಸಭಾ ಚುನಾವಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಅವರು ಸೋಲು ಕಂಡಿದ್ದರು. ಅಣ್ಣಾಮಲೈ ಸೋತಿದ್ದರೂ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಖಾತೆ ತೆರೆಯಲು ಮತ್ತು ಹಿಂದುತ್ವದ ಬೇರು ಭದ್ರಪಡಿಸಲು ಕೇಂದ್ರ ಸಚಿವ ಸ್ಥಾನ ನೀಡಬೇಕು ಅನ್ನೋ ಚರ್ಚೆಯಾಗಿತ್ತು. ಆದರೆ, ಅಣ್ಣಾಮಲೈ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡುವ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ.

ಪ್ರಧಾನಿ ನಿವಾಸದಲ್ಲಿ ಕಾಣಲೇ ಇಲ್ಲ!
ಇಂದು ಬೆಳಗ್ಗೆ ಕೇಂದ್ರ ಸಚಿವರಾಗುವ ನಾಯಕರನ್ನು ಪ್ರಧಾನಿ ನಿವಾಸದ ಚಹಾಕೂಟಕ್ಕೆ ಆಹ್ವಾನಿಸಲಾಗಿತ್ತು. ಅಣ್ಣಾಮಲೈ ಅವರು ಈ ಚಹಾಕೂಟದ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಅಣ್ಣಾಮಲೈ ಅವರಿಗೆ ಮೊದಲ ಸಚಿವ ಸಂಪುಟ ರಚನೆಯಲ್ಲಿ ಸ್ಥಾನ ನೀಡಲಾಗಿಲ್ಲ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಣ್ಣಾಮಲೈ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌; ಮೋದಿ ಕ್ಯಾಬಿನೆಟ್‌ನಲ್ಲಿ ಚಾನ್ಸ್‌ ಮಿಸ್‌? ಕಾರಣವೇನು?

https://newsfirstlive.com/wp-content/uploads/2024/06/ANNAMALAI_1.jpg

Load More