newsfirstkannada.com

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು; ಬೆಚ್ಚಿ ಬೀಳಿಸಿದ ವರದಿ

Share :

Published May 27, 2024 at 1:36pm

    ಎಡಿಜಿಪಿ ಅಲೋಕ್ ಕುಮಾರ್ ಅವರಿಂದ ಸ್ಫೋಟಕ ಮಾಹಿತಿ ಬಹಿರಂಗ

    ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸಿದ ಅಪಘಾತಕ್ಕೆ ಕಾರಣವೇನು?

    ಅಪಘಾತ, ದುರಂತಗಳಲ್ಲಿ ಜೀವ ಕಳೆದುಕೊಂಡ ನತದೃಷ್ಟರಿಗೆ ಸಂತಾಪ

ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ ಬಿಡುತ್ತಿವೆ.

ರಾಜ್ಯದಲ್ಲಿ ಸಂಭವಿಸುತ್ತಿರುವ ಭೀಕರ ಅಪಘಾತ ಹಾಗೂ ಸಾವಿನ ಸಂಖ್ಯೆ ಏರಿಕೆಯ ಬಗ್ಗೆ ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು ಕಳೆದ 24 ಗಂಟೆಯಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿಗೆ ಸಂಭವಿಸಿದ ಅತ್ಯಧಿಕ ಸಾವಿನ ಸಂಖ್ಯೆ. ಹಲವು ಅಪಘಾತಗಳಿಗೆ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣವಾಗಿದೆ. ರಸ್ತೆ ಸುರಕ್ಷತೆಯನ್ನು ಜವಾಬ್ದಾರಿಯುತವಾಗಿ ಪಾಲಿಸುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ಅವರು ನೀಡಿದ ಈ ಆಘಾತಕಾರಿ ವರದಿ ಬೆಚ್ಚಿ ಬೀಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿದ್ದು, ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: KKRTC ಬಸ್​- ಬೈಕ್ ಮಧ್ಯೆ ಭೀಕರ ಅಪಘಾತ.. ಸ್ಥಳದಲ್ಲೇ ಉಸಿರು ಚೆಲ್ಲಿದ ಮೂವರು ಯುವಕರು​ 

ಅಲೋಕ್ ಕುಮಾರ್ ಅವರ ವರದಿಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸುದ್ದಿ ಓದಿ ನನಗೆ ಬಹಳ ಆಘಾತವಾಗಿದೆ.

ರಸ್ತೆ ಸುರಕ್ಷತೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು.

ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ ನಿಮಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಕೂಡ ಈ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು; ಬೆಚ್ಚಿ ಬೀಳಿಸಿದ ವರದಿ

https://newsfirstlive.com/wp-content/uploads/2024/05/Accident-12.jpg

Load More