/newsfirstlive-kannada/media/post_attachments/wp-content/uploads/2023/10/bidar-1.jpg)
ಬೀದರ್: ವಿದ್ಯುತ್ ತಂತಿ ತಗುಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಶಿವಾರೆ (61), ಪತ್ನಿ ಶರಣಮ್ಮಾ (50) ಮೃತ ದುರ್ದೈವಿಗಳು.
/newsfirstlive-kannada/media/post_attachments/wp-content/uploads/2023/10/bidar-1.jpg)
ಇದನ್ನು ಓದಿ: ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಭೀಕರ ಅಪಘಾತ.. ಸ್ಥಳದಲ್ಲೇ ಗಂಡ, ಹೆಂಡತಿ ಸಾವು!
ಮೃತ ಮಲ್ಲಿಕಾರ್ಜುನ್​​ ಶಿವಾರೆ ಮನ್ಮಳ್ಳಿ ಗ್ರಾಮದ ಮಾಜಿ ಗ್ರಾ.ಪಂ ಉಪಾಧ್ಯಕ್ಷ ಆಗಿದ್ದರು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಶರಣಮ್ಮಾ ಅವರಿಗೆ ವಿದ್ಯುತ್ ತಂತಿ ತಗುಲಿದೆ. ಹೆಂಡತಿಯನ್ನು ರಕ್ಷಿಸಲು ಹೋದ ಪತಿಗೆ ವಿದ್ಯುತ್ ತಗುಲಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ವಿಷಯ ಗೊತ್ತಾಗುತ್ತಿದ್ದಂತೆ ಮೃತ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us