newsfirstkannada.com

‘ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ’- ಕೋಡಿಮಠದ ಶ್ರೀ ಆಘಾತಕಾರಿ ಭವಿಷ್ಯ

Share :

20-08-2023

    ಲೋಕಸಭಾ ಚುನಾವಣೆಗೂ ಮುನ್ನ ಅಲ್ಲೋಲ, ಕಲ್ಲೋಲ ಖಚಿತ

    ವಿಪರೀತ ಮಳೆಯಿಂದ 2 ದೇಶಗಳೇ ಸಂಪೂರ್ಣ ನಾಶವಾಗಲಿವೆ

    ನಮ್ಮ ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ

ಬೆಳಗಾವಿ: ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ. ಆದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಪತ್ನಿ, ಮಗುವನ್ನ ಕೊಲೆ ಮಾಡಿ ಪ್ರಾಣ ಕಳ್ಕೊಂಡ್ರಾ?; ದಾವಣಗೆರೆ ಕುಟುಂಬ ಅಮೆರಿಕದಲ್ಲಿ ಸಾವನ್ನಪ್ಪಿದ ಕೇಸ್‌ಗೆ ಟ್ವಿಸ್ಟ್

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ ಆಗಲಿದೆ ಎಂದು ಹೇಳಿದ್ದೆ. ಅದು ಈಗ ನಿಜವಾಗುತ್ತಿದೆ. ಕರ್ನಾಟಕದಲ್ಲಿ ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ವಿಧಾನಸಭಾ ಚುನಾವಣೆಗೂ ಮುಂಚೆಯೇ ಪಕ್ಷಾಂತರ ರಾಜಕೀಯದ ಬಗ್ಗೆ ಹೇಳಿದ್ದೆ. ಅದೂ ಈಗ ನಡೆಯುತ್ತಿದೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.

ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ಆಗುವ ಬಗ್ಗೆ ಏನೂ ಹೇಳಲ್ಲ. ಆದರೆ ಸರ್ಕಾರಕ್ಕೆ ತೊಂದರೆಯಿಲ್ಲ. ಇವರದ್ದು ಮುಗಿಯಲಿ. ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ನೋಡಿ ಹೇಳುತ್ತೇವೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಇನ್ನು, ದೇಶದಲ್ಲಿ ಮತ್ತೆ ಜಲಕಂಟಕ ಕಾಡಲಿದೆ. ಶ್ರಾವಣ ಮಾಸದ ಮಧ್ಯಂತರದಲ್ಲಿ ವಿಪರೀತ ಮಳೆಯಾಗಲಿದೆ. ಆದರೆ, ದಕ್ಷಿಣ ಭಾರತಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಶ್ರೀಗಳು ಹೇಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ’- ಕೋಡಿಮಠದ ಶ್ರೀ ಆಘಾತಕಾರಿ ಭವಿಷ್ಯ

https://newsfirstlive.com/wp-content/uploads/2023/08/kodimatha-swamiji.jpg

Load More