ಟೀಕೆಗಳಿಗೆ ಶುಬ್ಮನ್ ಗಿಲ್ ‘ಶತಕದ ಉತ್ತರ’
ಎರಡನೇ ಇನ್ನಿಂಗ್ಸ್ನಲ್ಲಿ ಭಾರತಕ್ಕೆ ಗಿಲ್ ಆಧಾರ
ಮೊದಲ ಇನ್ನಿಂಗ್ಸ್ನಲ್ಲಿ ಜೈಸ್ವಾಲ್ ಅದ್ಭುತ ದ್ವಿಶತಕ
ವೈಜಾಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿದಿದ್ದಾರೆ.
ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 2ನೇ ಟೆಸ್ಟ್ನ 3ನೇ ದಿನದಲ್ಲಿ ಶುಭ್ಮನ್ ಗಿಲ್ ಮತ್ತೆ ಟ್ರ್ಯಾಕ್ಗೆ ಮರಳಿದ್ದಾರೆ. 132 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ 2 ಮನಮೋಹಕವಾದ ಸಿಕ್ಸರ್ ಸಹಿತ ಸೆಂಚುರಿ ಬಾರಿಸಿದರು. ಈ ಮೂಲಕ ತಮ್ಮ ಟೆಸ್ಟ್ ವೃತ್ತಿ ಜೀವನದ 3ನೇ ಶತಕವನ್ನು ಸಿಡಿಸಿ ಬ್ಯಾಟ್ ಎತ್ತಿ ಗಿಲ್ ಸಂಭ್ರಮಿಸಿದರು.
ಇನ್ನು ಶುಭ್ಮನ್ ಗಿಲ್ಗೆ ಆಲ್ರೌಂಡರ್ ಅಕ್ಷರ್ ಪಟೇಲ್ ಸಾಥ್ ನೀಡುತ್ತಿದ್ದಾರೆ. 4 ವಿಕೆಟ್ ಕಳೆದುಕೊಂಡಿರುವ ಟೀಮ್ ಇಂಡಿಯಾ 205 ರನ್ ಗಳಿಸಿ ಬೃಹತ್ ಮೊತ್ತದತ್ತ ಹೆಜ್ಜೆಯನ್ನು ಇಡುತ್ತಿದೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಭಾರತ ತಂಡವು 348 ರನ್ಗಳ ಮುನ್ನಡೆಯನ್ನು ಸಾಧಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ಮಿಂಚಿನ ದ್ವಿಶತಕ ಸಿಡಿಸಿದ್ದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ