newsfirstkannada.com

BREAKING: ಪುತ್ರನ ಮೇಲೆ ಫುಲ್‌ ಗರಂ ಆದ ಸಿದ್ದರಾಮಯ್ಯ; ಸಿಎಂ ನಿವಾಸಕ್ಕೆ ಡಿಕೆಶಿ ದಿಢೀರ್‌ ಭೇಟಿ

Share :

16-11-2023

    ಸರ್ಕಾರಿ ನಿವಾಸ ಕಾವೇರಿಗೆ ಯತೀಂದ್ರ ಅವರನ್ನು ಕರೆಸಿಕೊಂಡ ಸಿಎಂ

    ನೀನು ಬಹಿರಂಗವಾಗಿ ಮಾತನಾಡಿದ್ದು ಯಾಕೆ ಎಂದು ಗರಂ ಆದ ಸಿದ್ದು

    ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿ.ಕೆ ಶಿವಕುಮಾರ್ ದಿಢೀರ್ ಭೇಟಿ

ಬೆಂಗಳೂರು: ಹಲೋ ಅಪ್ಪ ಅಂತಾ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ತಂದೆಗೆ ಕರೆ ಮಾಡಿ ಮಾತಾಡಿರೋ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನೇ ಅಸ್ತ್ರವಾಗಿ ಮಾಡಿಕೊಂಡ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಸುಲಿಗೆಪುತ್ರನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಎಂದು ಕಿಡಿಕಾರಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಸಿಎಂ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ತಮ್ಮ ಸರ್ಕಾರಿ ನಿವಾಸ ಕಾವೇರಿಗೆ ಯತೀಂದ್ರ ಅವರನ್ನು ಕರೆಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರನ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ನೀನು ಬಹಿರಂಗವಾಗಿ ಮಾತನಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕ್ಷೇತ್ರದ ಕಾರ್ಯಕರ್ತರಿಗೆ ಸಂಬಂಧಿಸಿದ ವಿಚಾರವಾದರೂ ಮಾಧ್ಯಮಗಳ ಮುಂದೆ ಮಾತನಾಡಿದ್ದು ಯಾಕೆ ಎಂದು ಬೇಸರದಿಂದಲೇ ಕೇಳಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯರ ಪ್ರಶ್ನೆಗೆ ಉತ್ತರಿಸಿದ ಯತೀಂದ್ರ ಅವರು ಕ್ಷೇತ್ರದ ವಿಚಾರವಾಗಿರುವ ಕಾರಣ ಎಲ್ಲರ ಮುಂದೆ ಮಾತನಾಡಿದೆ ಎಂದು ಸಮುಜಾಯಿಷಿ ನೀಡಲು ಯತ್ನಿಸಿದರು ಎನ್ನಲಾಗಿದೆ. ಇದಕ್ಕೆ ಮತ್ತೆ ಗರಂ ಆದ ಸಿದ್ದರಾಮಯ್ಯನವರು ಬಹಿರಂಗವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಗರಂ ಆಗಿಯೇ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಸುಲಿಗೆ ಸುಪುತ್ರನಿಂದ ಕಾಸಿಗಾಗಿ ಹುದ್ದೆ ವ್ಯವಹಾರ’- ಯತೀಂದ್ರ ಸಿದ್ದರಾಮಯ್ಯ ವೈರಲ್ ವಿಡಿಯೋಗೆ HDK ಕಿಡಿ

ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದಿಢೀರ್ ಭೇಟಿ ಕೊಟ್ಟಿದ್ದಾರೆ. ಸರ್ಕಾರಿ ನಿವಾಸ ಕಾವೇರಿಗೆ ಆಗಮಿಸಿರುವ ಡಿಸಿಎಂ, ಯತೀಂದ್ರ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಚರ್ಚೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪುತ್ರನ ಮೇಲೆ ಫುಲ್‌ ಗರಂ ಆದ ಸಿದ್ದರಾಮಯ್ಯ; ಸಿಎಂ ನಿವಾಸಕ್ಕೆ ಡಿಕೆಶಿ ದಿಢೀರ್‌ ಭೇಟಿ

https://newsfirstlive.com/wp-content/uploads/2023/11/CM-Siddaramaiah-1.jpg

Load More