newsfirstkannada.com

ಡಾ.ಭುಜಂಗ ಶೆಟ್ಟಿ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ

Share :

20-05-2023

    ನೇತ್ರದಾನವೇ ಮಹಾದಾನ ಎಂದಿದ್ದ ನೇತ್ರತಜ್ಞ

    ಡಾ. ಭುಜಂಗಶೆಟ್ಟಿಗೆ ಹಠಾತ್​ ಹೃದಯಾಘಾತ

    ಲಕ್ಷಾಂತರ ಜನರ ಬಾಳಿಗೆ ಬೆಳಕಾದ ಭುಜಂಗಶೆಟ್ಟಿ

ನೇತ್ರದಾನವೇ ಮಹಾದಾನ ಎಂದು ಜಗತ್ತಿಗೆ ಸಾರಿದ್ದ ಖ್ಯಾತ ನೇತ್ರತಜ್ಞ ಡಾ.ಭುಜಂಗಶೆಟ್ಟಿ (69) ಹಠಾತ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಸಂಜೆ ಆಸ್ಪತ್ರೆಯಿಂದ ಡ್ಯೂಟಿ ಮುಗಿಸಿ ಮನೆಗೆ ತೆರಳಿದ್ದರು. ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಈ ಕೂಡಲೇ ಚಿಕಿತ್ಸೆಗಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಡಾ.ಭುಜಂಗಶೆಟ್ಟಿ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾರಾಯಣ ನೇತ್ರಾಲಯದ ಖ್ಯಾತ ನೇತ್ರತಜ್ಞರಾದ ಡಾ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಭುಜಂಗ ಶೆಟ್ಟಿಯವರು ಲಕ್ಷಾಂತರ ಜನರಿಗೆ ದೃಷ್ಟಿ ಸಾಮರ್ಥ್ಯ ನೀಡುವ ಮೂಲಕ ಅವರ ಕುಟುಂಬಗಳಿಗೆ ಬೆಳಕಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಮಣಿಪಾಲ ಆಸ್ಪತ್ರೆಯ ಶವಗಾರದಿಂದ ನಾರಾಯಣ ಆಸ್ಪತ್ರೆಗೆ ಮೃತದೇಹ ಶಿಫ್ಟ್​ ಮಾಡಲಾಗುತ್ತದೆ. ಅಲ್ಲಿ 11 ಗಂಟೆಯಿಂದ 2 ಗಂಟೆಯವರಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬಳಿಕ ಹರಿಶ್ಚಂದ್ರ ಘಾಟ್ ನಲ್ಲಿ‌ ಅಂತಿಮ ವಿಧಿವಿಧಾನ ನಡೆಯಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಾ.ಭುಜಂಗ ಶೆಟ್ಟಿ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ

https://newsfirstlive.com/wp-content/uploads/2023/05/SIDDARAMAIAH-Bhujanga-Shetty.jpg

Load More