newsfirstkannada.com

×

ಪವಿತ್ರ ‘ಇಂಡಿಯಾ’ ಮೇಲೆ ನಿಮ್ಗೆ ಯಾಕೆ ಇಷ್ಟೊಂದು ದ್ವೇಷ? -ಮುಜಾಹಿದ್ದೀನ್ ಸಂಘಟನೆ ಹೆಸರಲ್ಲೂ ‘INDIA’ ಇದೆ ಎಂದಿದ್ದ ಮೋದಿಗೆ ಸಿದ್ದು ಪ್ರಶ್ನೆ

Share :

Published July 27, 2023 at 12:33pm

    ನಿಮ್ಮನ್ನು ನೀರವ್, ಲಲಿತ್ ಮೋದಿ ಜೊತೆಗೆ ಹೋಲಿಸಬಹುದೇ?

    ರಾಹುಲ್ ಗಾಂಧಿ ವಿರುದ್ಧದ ಕ್ರಮ ನಿಮಗೆ ಅನ್ವಯ ಆಗುವುದಿಲ್ಲವೇ?

    ಸರಣಿ ಟ್ವೀಟ್​ ಮಾಡಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರೇ ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಜೂನ್ 25 ರಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರು ಇಟ್ಟುಕೊಂಡಿರೋದನ್ನು ಗೇಲಿ ಮಾಡಿದ್ದರು. ಕಾಂಗ್ರೆಸ್​ ನೇತೃತ್ವದ ವಿರೋಧ ಪಕ್ಷಗಳು INDIA ಎಂದು ಹೆಸರು ಇಟ್ಟುಕೊಂಡಿವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹೆಸರಿನಲ್ಲೂ ‘INDIA’ ಇದೆ ಅಂತಾ ವಾಗ್ದಾಳಿ ನಡೆಸಿದ್ದರು.

ಮೋದಿಯ ಈ ಹೇಳಿಕೆ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?

ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?

ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪವಿತ್ರ ‘ಇಂಡಿಯಾ’ ಮೇಲೆ ನಿಮ್ಗೆ ಯಾಕೆ ಇಷ್ಟೊಂದು ದ್ವೇಷ? -ಮುಜಾಹಿದ್ದೀನ್ ಸಂಘಟನೆ ಹೆಸರಲ್ಲೂ ‘INDIA’ ಇದೆ ಎಂದಿದ್ದ ಮೋದಿಗೆ ಸಿದ್ದು ಪ್ರಶ್ನೆ

https://newsfirstlive.com/wp-content/uploads/2023/07/MODI-2-2.jpg

Load More