newsfirstkannada.com

ರಾಜ್ಯಕ್ಕೆ ಮಾಡಿದ ಅಪಮಾನ, ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ -ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಕೇಂದ್ರದ ವಿರುದ್ಧ CM ವಾಗ್ದಾಳಿ

Share :

Published January 10, 2024 at 8:44am

Update January 10, 2024 at 9:43am

    ರಾಜ್ಯದ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರದ ಮೋದಿ ಸರ್ಕಾರ

    ನಾಲ್ವಡಿ ಕೃಷ್ಣರಾಜ ಒಡೆಯರ್‌, ರಾಣಿ ಚೆನ್ನಮ್ಮ ಸ್ತಬ್ಧಚಿತ್ರ ನಿರಾಕರಣೆ

    ಕನ್ನಡಿಗರು ಕಟ್ಟಿದ್ದ ಬ್ಯಾಂಕ್, ಏರ್​ಪೋರ್ಟ್ ಮಾರಾಟ ಮಾಡ್ತಿದೆ-CM

ಬೆಂಗಳೂರು: ಜನವರಿ 26ರಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ತಬ್ಧಚಿತ್ರ, ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ.

ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಮೋದಿ ಆಡಳಿತಕ್ಕೆ ನುಂಗಲಾರದ ತುತ್ತಾಗಿದೆ ಎಂದು ಕಿಡಿಕಾರಿದ್ದಾರೆ.

‘ಕನ್ನಡಿಗರ ತಾಳ್ಮೆ ಪರೀಕ್ಷಿಸಲು ಕೇಂದ್ರ ಹೋಗಬಾರದು’

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಮಾಡುತ್ತಿದೆ. ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ. ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್​ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

‘ದೇಶಕ್ಕೆ ಪರಿಚಯಿಸುವ ಅವಕಾಶ ಕಸಿದುಕೊಂಡಿದೆ’

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕವು ಕಳೆದ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಜನವರಿ 26ಕ್ಕೆ ಕಳುಹಿಸುತ್ತಿದೆ. ಬರೋಬ್ಬರಿ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕದ್ದು. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧಚಿತ್ರ ವಿಜ್ರಂಬಿಸಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯಕ್ಕೆ ಮಾಡಿದ ಅಪಮಾನ, ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ -ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಕೇಂದ್ರದ ವಿರುದ್ಧ CM ವಾಗ್ದಾಳಿ

https://newsfirstlive.com/wp-content/uploads/2023/11/MODI_SIDDU.jpg

Load More