newsfirstkannada.com

ಕಾಂಗ್ರೆಸ್‌ಗೆ ಜಗದೀಶ್ ಶೆಟ್ಟರ್‌ ರಾಜೀನಾಮೆ.. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಏನು?

Share :

Published January 25, 2024 at 2:01pm

    ಒತ್ತಡದಿಂದ ಬಿಜೆಪಿ ಪಕ್ಷಕ್ಕೆ ಹೋಗಿದ್ದಾರೋ ಗೊತ್ತಿಲ್ಲ ಎಂದ ಡಿಕೆಶಿ

    ಕಾಂಗ್ರೆಸ್‌ ಮರುಜೀವಿ ಕೊಟ್ಟಿದೆ ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದಿದ್ದರು

    ಶೆಟ್ಟರ್‌ ಅವರನ್ನು ಗೌರವದಿಂದ ನಡೆಸಿಕೊಂಡು ಎಂಎಲ್‌ಸಿ ಮಾಡಿದ್ದೇವೆ

ಬೆಂಗಳೂರು: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿರಿಯ ನಾಯಕರು ಎಂದು ಗೌರವಯುತವಾಗಿ ನಡೆಸಿಕೊಂಡಿದ್ದೆವು. ಆದರೆ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ನನಗೆ ಇನ್ನೂ ರಾಜೀನಾಮೆ ಪತ್ರ ತಲುಪಿಲ್ಲ. ಕೆಪಿಸಿಸಿ ಕಚೇರಿಯಲ್ಲೇ ನಿಂತು ಹೇಳುತ್ತಾ ಇದ್ದೀನಿ. ನನಗೆ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್‌ ಪಕ್ಷ ಮರುಜೀವಿ ಕೊಟ್ಟಿದೆ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ರು. ಬಿಜೆಪಿ ವಿರುದ್ಧ ಬಹಳಷ್ಟು ಹೇಳಿಕೆಗಳನ್ನ ಕೊಟ್ಟಿದ್ದಾರೆ. ಯಾವ ರೀತಿ ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನುತ್ತಿದ್ದರು.

ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತಾಗಲೂ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಗೌರವದಿಂದ ನಡೆಸಿಕೊಂಡು ಎಂಎಲ್‌ಸಿ ಮಾಡಿದ್ದೇವೆ. ಒತ್ತಡದಿಂದ ಬಿಜೆಪಿ ಪಕ್ಷಕ್ಕೆ ಹೋಗಿದ್ದಾರಾ ಇಲ್ಲವೋ ಗೊತ್ತಿಲ್ಲ. ಅಂದು ಟಿಕೆಟ್ ತಪ್ಪಿದಾಗ ದೇಶದ ಹಿತ‌ ನೆನಪಿರಲಿಲ್ಲವಾ? ಜಗದೀಶ್ ಶೆಟ್ಟರ್ ಅವರು ನಮ್ಮ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಅವಮಾನ ಆಗಿದೆ ಅಂತ ಕಾಂಗ್ರೆಸ್‌ಗೆ ಬಂದರು

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಿನ್ನೆ ಬೆಳಗ್ಗೆ ಕೂಡ ಅವರ ಜೊತೆ ಮಾತನಾಡಿದ್ದೇನೆ. ಆದರೆ ಈಗ ಅವರು ದೆಹಲಿಯಲ್ಲಿ ಏನು ಮಾಡಿದ್ದಾರೆ ಗೊತ್ತಿಲ್ಲ. ಬಿಜೆಪಿಯವರು ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಬಿಜೆಪಿಯಲ್ಲಿ ಅವಮಾನ ಆಗಿದೆ ಅಂತ ಕಾಂಗ್ರೆಸ್‌ಗೆ ಬಂದರು. ನಾವು ಅವರನ್ನು ಎಂಎಲ್ಸಿ ಮಾಡಿದ್ದೆವು. ಏನು ನಿರ್ಧಾರ ಮಾಡಿದ್ದಾರೆ ನೋಡಿ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್‌ಗೆ ಜಗದೀಶ್ ಶೆಟ್ಟರ್‌ ರಾಜೀನಾಮೆ.. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಏನು?

https://newsfirstlive.com/wp-content/uploads/2023/08/DKS_SIDDU.jpg

Load More