newsfirstkannada.com

ಬಂಗಾರದ ಮನುಷ್ಯ ಚಿತ್ರದ ಹಾಡು ಹೇಳುತ್ತಾ ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ!

Share :

Published February 16, 2024 at 10:44am

Update February 16, 2024 at 12:13pm

  ಆಗದು ಎಂದು ಕೈಕಟ್ಟಿ ಕುಳಿತರೇ ಸಾಗದು ಕೆಲಸವು ಮುಂದೆ..

  ವರನಟ ಡಾ.ರಾಜ್‌ಕುಮಾರ್ ಸಿನಿಮಾದ ಹಾಡಿನ ಸಾಲು ಹೇಳಿದ ಸಿಎಂ

  ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ

2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಹಿಂದೆ ಅಸ್ತಿತ್ವದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಬಜೆಟ್ ಮಂಡನೆಯ ಆರಂಭದಲ್ಲಿ ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೇ ಸಾಗದು ಕೆಲಸವು ಮುಂದೆ ಎನ್ನುವ ವರನಟ ಡಾ.ರಾಜ್‌ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾದ ಹಾಡನ್ನು ನೆನಪಿಸಿಕೊಂಡರು. ಆರ್‌. ಎನ್‌ ಜಯಗೋಪಾಲ್ ಅವರ ಸಾಹಿತ್ಯದಂತೆ ಕಾಂಗ್ರೆಸ್ ಸರ್ಕಾರ ತಮ್ಮ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ.

ಇದನ್ನೂ ಓದಿ: Karnataka Budget Live Updates: ‘ಕೃಷಿ ಭಾಗ್ಯ’ ಮರು ಜಾರಿ -ಸಿದ್ದರಾಮಯ್ಯ ಘೋಷಣೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೇಲೆ ವಿರೋಧ ಪಕ್ಷಗಳಿಗೆ ನಂಬಿಕೆ ಇರಲಿಲ್ಲ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಅಸಾಧ್ಯ ಎಂದು ಹೇಳಿದ್ದವು. ಆದರೆ ನಾವು ಆಗದು ಎಂದು ಕೈ ಕಟ್ಟಿ ಕುಳಿತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಬಜೆಟ್‌ನಲ್ಲಿ ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಮೇಲೆ ನಮಗೆ ನಂಬಿಕೆಯಿದ್ದು, ರಾಜ್ಯದ ಜನರಿಗೆ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಮಾಡದ ಕೆಲಸವನ್ನ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ ಎನ್ನುತ್ತಾ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಂಗಾರದ ಮನುಷ್ಯ ಚಿತ್ರದ ಹಾಡು ಹೇಳುತ್ತಾ ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ!

https://newsfirstlive.com/wp-content/uploads/2024/02/Siddaramaiah-Dr-Rajkumar.jpg

Load More