ದುಷ್ಕರ್ಮಿಗಳಿಂದ ಹತನಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಘೋಷಣೆ
ಮುಖ್ಯಮಂತ್ರಿ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ
ಸಿದ್ದರಾಮಯ್ಯ ಸರ್ಕಾರದಿಂದ ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಪರಿಹಾರ
ಮಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತನಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾಚ್ಗೆ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಂಗಳೂರಿನಲ್ಲಿ 2018 ಜನವರಿ 3 ರಂದು ಕಾಟಿಪಳ್ಳದ ದೀಪಕ್ ರಾವ್ ದುಷ್ಕರ್ಮಿಗಳಿಂದ ಸಾವನ್ನಪ್ಪಿದ್ದರು. ಕಳೆದ ಜುಲೈ 19ರಂದು ಬೆಳ್ಳಾರೆಯ ಮಸೂದ್ ಬಲಿಯಾಗಿದ್ದರು. ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಕೂಡ ದುಷ್ಕರ್ಮಿಗಳಿದ ಬಲಿಯಾಗಿದ್ದರು. ಕಳೆದ ವರ್ಷ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಕೂಡ ಕೊನೆಯುಸಿರೆಳೆದಿದ್ದರು. ಆದರೀಗ ಈ ನಾಲ್ಕು ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಿದೆ.
ಅಂದಹಾಗೆಯೇ ಮತೀಯ ಕಾರಣದಿಂದ ಈ ನಾಲ್ಕು ಜನರು ಕೊಲೆಯಾಗಿದ್ದರು. ಆದರೆ ಇವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಘೋಷಣೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ