ಸರ್ಕಾರ v/s ರಾಜಮನೆತನ ನಡುವೆ ಮುಂದುವರಿದ ಜಟಾಪಟಿ
ಚಾಮುಂಡಿಬೆಟ್ಟದಲ್ಲಿ ಇವತ್ತು ನಡೆಯಲಿರುವ ಪ್ರಾಧಿಕಾರದ ಸಭೆ
ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ ಎಂದ ಒಡೆಯರ್
ಮೈಸೂರು: ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಕಳೆದ 10 ರಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಿಎಂ ಇದೀಗ ಮತ್ತೆ ಚಾಮುಂಡಿ ತಾಯಿಯ ಮೊರೆ ಹೋಗಿದ್ದಾರೆ. ದೇವರ ದರ್ಶನದ ಬಳಿಕ ಬೆಟ್ಟದ ಅಭಿವೃದ್ದಿ ಪ್ರಾಧಿಕಾರ ಸಭೆ ನಡೆಸಲಿದ್ದಾರೆ. ಮೈಸೂರು ರಾಜಮನೆತನದ ವಿರೋಧದ ನಡುವೆಯೂ ಪ್ರಾಧಿಕಾರದ ಸಭೆ ನಡೆಸಲಿದ್ದು ಇದು ಒಡೆಯರ್ ಕುಟುಂಬದ ಕೆಂಗಣ್ಣಿಗೆ ಕಾರಣವಾಗಿದೆ.
ಇದನ್ನೂ ಓದಿ: ಚಾಮುಂಡಿ ಬೆಟ್ಟದ ಮೇಲಿದೆಯಾ ಸಿದ್ದರಾಮಯ್ಯ ಸರ್ಕಾರದ ಕಣ್ಣು..? ರಿಟ್ ಅರ್ಜಿ ಸಲ್ಲಿಸಿದ ರಾಜಮಾತೆ
ಪ್ರಾಧಿಕಾರದ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜಮಾತೆ ಪ್ರಮೋದಾದೇವಿ ಒಡೆಯರ್, ಗೈರಾಗಲು ನಿರ್ಧರಿಸಿದ್ದಾರೆ. ಸಭೆ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿಯಿಂದ ಪ್ರಮೋದಾದೇವಿಗೆ ಹಾಜರಾಗುವಂತೆ ಮೇಲ್ ಮೂಲಕ ಪತ್ರ ಕಳುಹಿಸಲಾಗಿತ್ತು.
ಅದಕ್ಕೆ ಮೇಲ್ ಮೂಲಕವೇ ಪ್ರಾಧಿಕಾರಕ್ಕೆ ಪ್ರತ್ಯುತ್ತರ ನೀಡಿರುವ ಪ್ರಮೋದಾದೇವಿ ಒಡೆಯರ್, ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ. ನ್ಯಾಯಾಲಯದ ವಿರುದ್ಧ ಸಭೆ ನಡೆಸುತ್ತಿರುವುದು ಸರಿಯಲ್ಲ. ಕಾನೂನು ಉಲ್ಲಂಘನೆ ಆಗಲಿದೆ. ಸೆಪ್ಟೆಂಬರ್ 5ಕ್ಕೆ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:ಶ್ರೇಯಾಂಕ ಪಾಟೀಲ್ಗೆ ಬಿಗ್ ಶಾಕ್.. ಹರಾಜಿನಲ್ಲಿ ಅನ್ಸೋಲ್ಡ್.. ಸ್ಮೃತಿ ಮಂದಾನಗೆ ಒಲಿದ ಲಕ್..!
ಜೊತೆಗೆ ಸಭೆಗೆ ಗೈರಾಗಲು ಪ್ರಮೋದಾದೇವಿ ಒಡೆಯರ್ ನಿರ್ಧಾರ ಮಾಡಿದ್ದಾರೆ. ಪ್ರಾಧಿಕಾರ ರಚನೆಗೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಾಧಿಕಾರ ರಚನೆ ಕುರಿತು ನ್ಯೂಸ್ ಫಸ್ಟ್ ವಿಸ್ತೃತ ವರದಿ ಮಾಡಿತ್ತು. ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಪ್ರಮೋದಾದೇವಿ, ಸರ್ಕಾರದ ನಡೆಯನ್ನು ಖಂಡಿಸಿತ್ತು. ಚಾಮುಂಡೇಶ್ವರಿ ಬೆಟ್ಟ ನಮ್ಮ ಆಸ್ತಿ ಎಂದು ಪ್ರತಿಪಾದನೆ ಮಾಡಿದ್ದರು.
ಇದನ್ನೂ ಓದಿ:ಚಾಮುಂಡಿ ಬೆಟ್ಟಕ್ಕಾಗಿ ರಿಟ್ ಅರ್ಜಿ ಸಲ್ಲಿಸಿದ ಪ್ರಮೋದಾ ದೇವಿ; ಸರ್ಕಾರಕ್ಕೆ ಬರೋಬ್ಬರಿ 13 ಪ್ರಶ್ನೆಗಳು; ಏನದು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ