newsfirstkannada.com

ಇಂದಿರಾ ಕ್ಯಾಂಟೀನ್​ ಊಟ ದುಬಾರಿ ಆಗೋದು ನಿಜಾನಾ..? ಗೊಂದಲಗಳಿಗೆ ಸಿದ್ದರಾಮಯ್ಯ ಉತ್ತರ

Share :

20-08-2023

    ಸಿದ್ದರಾಮಯ್ಯ ಸ್ಪಷ್ಟನೆ ಬೆನ್ನಲ್ಲೇ ಬಡವರು ಖುಷ್

    ‘ಸರ್ಕಾರ ನೀಡುವ ದರದಲ್ಲಿ 5ರೂ ಹೆಚ್ಚಳ ಅಷ್ಟೇ’

    ‘ಗ್ರಾಹಕರಿಗೆ ಹಳೆಯ ದರದಲ್ಲೇ ಸಿಗಲಿದೆ ಹೊಸ ಮೆನು’

ಬೆಂಗಳೂರು: ಇಂದಿರಾ ಕ್ಯಾಂಟೀನ್​ ಊಟದ ದರದಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಪಡಿಸಿದ್ದಾರೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ.ಪಾಟೀಲ್​, ಇಂದಿರಾ ಕ್ಯಾಂಟೀಲ್​ನ ಊಟದ ದರ ಹೆಚ್ಚಳವಾಗಲಿದೆ ಎಂದಿದ್ದರು. ಈ ಸುದ್ದಿ ಜನರಲ್ಲಿ ಗೊಂದಲ ಮೂಡಿಸಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್​ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5ರೂ ಹೆಚ್ಚಳವಾಗಿದೆ ಅಷ್ಟೇ.

ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಅಂತ ಹೇಳಿದ್ದಾರೆ. ಈ ಬೆನ್ನಲ್ಲೇ ಸಚಿವ ಹೆಚ್​ಕೆ ಪಾಟೀಲ್​ ಕೂಡ ಇಂದಿರಾ ಕ್ಯಾಂಟೀನ್​ನಲ್ಲಿ ಆಹಾರದ ದರ ಬದಲಾವಣೆ ಇಲ್ಲ ಅಂತ ಸ್ಪಷ್ಟನೆ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿರಾ ಕ್ಯಾಂಟೀನ್​ ಊಟ ದುಬಾರಿ ಆಗೋದು ನಿಜಾನಾ..? ಗೊಂದಲಗಳಿಗೆ ಸಿದ್ದರಾಮಯ್ಯ ಉತ್ತರ

https://newsfirstlive.com/wp-content/uploads/2023/08/Siddaramaiah-3.jpg

Load More