newsfirstkannada.com

ಸಚಿವರು-ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೇವಾಲ ಭಾಗಿ ಆರೋಪ -ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Share :

14-06-2023

    ಸಭೆ ಬಗ್ಗೆ BJP-JDS ನಾಯಕರಿಂದ ಸರಣಿ ಪ್ರಶ್ನೆ

    ವಿವಾದ ಆಗ್ತಿದ್ದಂತೆಯೇ ಉತ್ತರಕೊಟ್ಟ ಮುಖ್ಯಮಂತ್ರಿ

    ಸಿದ್ದರಾಮಯ್ಯರ ಪ್ರಕಾರ ನಿನ್ನೆ ನಿಜಕ್ಕೂ ಆಗಿದ್ದೇನು..?

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರುಗಳು ಮತ್ತು ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್​ ನಾಯಕರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.

ಇದು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಎದುರು ಸ್ಪಷನೆ ನೀಡುವ ಪ್ರಯತ್ನ ಮಾಡಿದ್ದಾರೆ. ಸುರ್ಜೇವಾಲಾ ಇದ್ದಾಗ ಅಧಿಕೃತ ಸಭೆ ನಡೆದಿಲ್ಲ. ಶಾಸಕರ ಜೊತೆ ಚರ್ಚೆ ಮಾಡಿದ್ದಾರೆ ಅಷ್ಟೇ. ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದಾಗಿದೆ. ಚುನಾವಣೆ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿತ್ತು. ಕುಮಾರಸ್ವಾಮಿ ಸುಮ್ಮನೆ ಆರೋಪ ಮಾಡುತ್ತಾರೆ. ಸುರ್ಜೇವಾಲಾ ಅಧಿಕಾರಿಗಳ ಸಭೆ ಕರೆಯಲು ಆಗುತ್ತಾ ಹೇಳಿ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: BBMP ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೇವಾಲ ಭಾಗಿ -ಹೊಸ ವಿವಾದದಲ್ಲಿ ಸಿದ್ದರಾಮಯ್ಯ ಸರ್ಕಾರ..!

ಸುರ್ಜೇವಾಲ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವರು ಶಾಂಗ್ರಿಲಾ ಹೋಟೆಲ್​ನಲ್ಲಿದ್ದರು. ಡಿ.ಕೆ.ಶಿವಕುಮಾರ್ ಅವರನ್ನ ಭೇಟಿ ಮಾಡಲು ಹೋಗಿದ್ದರು. ಈ ವೇಳೆ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಸಿಟಿ ರೌಂಡ್ಸ್ ಕರೆದುಕೊಂಡು ಹೋಗಲು ಶಾಂಗ್ರಿಲಾ ಹೋಟೆಲ್​ಗೆ ಹೋಗಿದ್ದರು. ಅಲ್ಲಿ ಭೇಟಿಯಾಗಿರಬಹುದಷ್ಟೇ. ಅದರ ಹೊರತಾಗಿ ಅವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಬೇಕಾದರೆ ಬಿಜೆಪಿಯವರು ರಾಜ್ಯಪಾಲರಿಗೆ ದೂರು ಕೊಡಲಿ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವರು-ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೇವಾಲ ಭಾಗಿ ಆರೋಪ -ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

https://newsfirstlive.com/wp-content/uploads/2023/06/SIDDU1-1.jpg

Load More