ಸಿದ್ದರಾಮಯ್ಯ ರಾಜ್ಯಭಾರ ಅಧಿಕೃತ ಆರಂಭ
ಈ ಬಾರಿ ದೇವರ ಹೆಸರಲ್ಲಿ ಪ್ರಮಾಣ ವಚನ
ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸಿಎಂ ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಿದ್ದರಾಮಯ್ಯನವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಸಿಎಂ ಪಟ್ಟಾಭಿಷೇಕದ ಸಮಾರಂಭದಲ್ಲಿ ಕಾಂಗ್ರೆಸ್ನ ಅತಿರಥ ನಾಯಕರು ಸಾಕ್ಷಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ತಮಿಳುನಾಡು ಸಿಎಂ ಸ್ಟಾಲಿನ್, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ನಾಥ್, ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಸಾಕ್ಷಿಯಾಗಿದ್ದಾರೆ.
ನಗರದ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿದೆ. ಅದ್ಧೂರಿ ಸಮಾರಂಭದಲ್ಲಿ ಲಕ್ಷಾಂತರ ಜನರು ಸಿಎಂ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದಾರೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಹರ್ಷೋದ್ಘಾರದಲ್ಲಿ ರಾಜ್ಯದಲ್ಲಿ ಇಂದಿನಿಂದ ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ